ಬಳಂಜ, ಜು. 13 : ಕಳೆದ ಹಲವು ವರ್ಷಗಳಿಂದ ಬಳಂಜ- ಸುದೆಗುಂಡಿ- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಯಾದ ಬಳಂಜ ಸುದೆಗುಂಡಿ ರಸ್ತೆಗೆ ಶಾಸಕ ಹರೀಶ್ ಪೂಂಜರವರು ಜು. 12ರಂದು ಶಿಲಾನ್ಯಾಸ ನೇರವೇರಿಸಿದರು. ಬಹುಬೇಡಿಕೆಯ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟಿದ್ದಕ್ಕಾಗಿ, ಗ್ರಾಮಸ್ಥರು ಶಾಸಕ ಹರೀಶ್ ಪೂಂಜಾ ಅವರನ್ನು ಅಭಿನಂದಿಸಿದರು.

ರೂ 1.00 ಕೋಟಿ ವೆಚ್ಚದಲ್ಲಿ ರಸ್ತೆ ಕಾಂಕ್ರೀಟಿಕರಣಗೊಳ್ಳುತ್ತಿದ್ದು ಈ ಬಳಂಜ- ನಾಲ್ಕೂರು- ತೆಂಕಕಾರಂದೂರು ಗ್ರಾಮದ ಜನರ ಬೇಡಿಕೆಗೆ ಸ್ಪಂದಿಸುವುದಾಗಿ ಶಾಸಕ ಹರೀಶ್ ಪೂಂಜರವರು ತಿಳಿಸಿದರು. ಬಳಂಜ-ನಾಲ್ಕೂರು- ತೆಂಕಕಾರಂದೂರುವಿನ ಆಟೋ ಚಾಲಕ ಮಾಲಕ ಸಂಘದಿಂದ ಸುಸಜ್ಜಿತ ಆಟೋ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿಕೊಡುವಂತೆ ಶಾಸಕರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಾಕೇಶ್ ಹೆಗ್ಡೆ, ಪ್ರಗತಿಪರ ಕೃಷಿಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಸತೀಶ್ ರೈ ಬಾರ್ದಡ್ಕ,ಹಿರಿಯರಾದ ಯುವರಾಜ್ ಜೈನ್,ಇಂಜೀನಿಯರ್ ದಶರಥ,ಗಣೇಶ್ ಸಂಭ್ರಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅಗ್ನೀವೀರ್ ಯೋಜನೆಯಲ್ಲಿ ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜದ ರಂಜಿತ ಸಹೋದರರ ಹೆತ್ತವರನ್ನು ಗೌರವಿಸಲಾಯಿತು.


