ಬೆಳ್ತಂಗಡಿ : ಬಂಡಾಜೆ ಅರಣ್ಯ ಪ್ರದೇಶದಲ್ಲಿ ಗುಡ್ಡ ಜರಿತ – ಆತಂಕ ಬೇಡ ಎಂದ ಅರಣ್ಯ ಇಲಾಖೆ !

ಬೆಳ್ತಂಗಡಿ, ಜೂ 5 : ಕುದುರೆಮುಖದ ಬಂಡಾಜೆ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಲಘು ಪ್ರಮಾಣದ ಗುಡ್ಡಜರಿತ ಸಂಭವಿಸಿದ್ದು, ಕಲ್ಲು ಹಾಗೂ ಮಣ್ಣು ಜರಿದಿರುವ ಘಟನೆ ಗಮನಕ್ಕೆ ಬಂದಿದೆ.

Advertisement

ಗುಡ್ಡಜರಿತ ಸಂಭವಿಸಿದ ಸ್ಥಳವನ್ನು ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ಗ್ರಾಮಸ್ಥರು ಗಮನಿಸಿ ಮಾಹಿತಿ ನೀಡಿದ್ದಾರೆ. ಆದರೆ ಗುಡ್ಡಜರಿತ ಉಂಟಾದ ಪ್ರದೇಶದಲ್ಲಿ ಯಾವುದೇ ಮನೆಗಳು ಅಥವಾ ಮಾನವ ವಸತಿ ಪ್ರದೇಶಗಳಿಲ್ಲದ ಕಾರಣ ಜೀವಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ ಎಂದು ಅರಣ್ಯ ಇಲಾಖೆ ಸ್ಪಷ್ಟಪಡಿಸಿದೆ.ಬಂಡಾಜೆ ಅರಣ್ಯ ಪ್ರದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ಇಂತಹ ಸಣ್ಣ ಪ್ರಮಾಣದ ಗುಡ್ಡಜರಿತಗಳು ಸಾಮಾನ್ಯವಾಗಿದ್ದು, ಜನರು ಅನಗತ್ಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಇಲಾಖೆ ತಿಳಿಸಿದೆ.

ಪರಿಸ್ಥಿತಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.