ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Advertisement

ಮಂಗಳೂರು, ಜ.19 : ಸುಲಿಗೆ ಪ್ರಕರಣವೊಂದರಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್‌ ಠಾಣೆಯ ವಾರಂಟ್ ಜಾರಿ ಸಿಬ್ಬಂದಿ ಬಂಧಿಸಿದ್ದಾರೆ. ಮಂಗಳೂರು ನಿವಾಸಿ ನವೀನ್ ಸಿಕ್ವೆರಾ (52) ಬಂಧಿತ ಆರೋಪಿ.

Advertisement

2011-12ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಸಂಖ್ಯೆ 195/2011, ಕಲಂ 392 ಐಪಿಸಿ ಅಡಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015ರಲ್ಲಿ ಆರೋಪಿಗೆ ಮೂರು ವರ್ಷಗಳ ಕಠಿಣ ಸೆರೆವಾಸ ಮತ್ತು 5,000 ರೂ. ದಂಡ ವಿಧಿಸಿ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ ಅರ್ಜಿ ಸಲ್ಲಿಸಿದ್ದನು. ಅರ್ಜಿ ಪರಿಶೀಲಿಸಿದ ಉಚ್ಚ ನ್ಯಾಯಾಲಯವು ಆರೋಪಿಗೆ ಒಂದು ವರ್ಷ ಸಾದಾ ಸೆರೆವಾಸ ಮತ್ತು 15,000 ರೂ. ದಂಡ ವಿಧಿಸಿ, ಈ ಶಿಕ್ಷೆಯನ್ನು 2022ರೊಳಗೆ ಅನುಭವಿಸುವಂತೆ ಆದೇಶಿಸಿತ್ತು. ಇದಕ್ಕೆ ವಿಫಲವಾದಲ್ಲಿ ಜಿಲ್ಲಾ ನ್ಯಾಯಾಲಯದ ಹಿಂದಿನ ಆದೇಶದಂತೆ ಶಿಕ್ಷೆ ಅನುಭವಿಸುವಂತೆ ಸೂಚಿಸಲಾಗಿತ್ತು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ