ಪುತ್ತೂರು : ಶಾಸಕ ಅಶೋಕ್ ರೈ’ಗೆ ಅಭಿನಂದನೆ ಸಲ್ಲಿಸಿ ಹಾಕಿದ್ದ ಬ್ಯಾನರ್ ಗೆ ಕಿಡಿಗೇಡಿಗಳಿಂದ ಹಾನಿ – ದೂರು ದಾಖಲು

Advertisement

ಪುತ್ತೂರು, ಡಿ. 18 : ಪುರುಷರಕಟ್ಟೆ- ಶಿಬರ – ನಡುವಾಲ್ ರಸ್ತೆ ಅಭಿವೃದ್ಧಿಯ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. ಘಟನೆಯ ಬಗ್ಗೆ ನರಿಮೊಗರು ವಲಯ ಕಾಂಗ್ರೆಸ್‌ ಅಧ್ಯಕ್ಷ ಹೊನ್ನಪ್ಪ ಕೈಂದಾಡಿಯವರು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ಗ್ರಾಮದ ನಡುವಾಲ್ ಎಂಬಲ್ಲಿಗೆ ರಸ್ತೆ ನಿರ್ಮಾಣ ಕಾಮಗಾರಿಗೆ 5 ಲಕ್ಷ ಅನುದಾನವನ್ನು ಶಾಸಕ ಅಶೋಕ್ ರೈ ಅವರು ಒದಗಿಸಿದ್ದರು. ಈ ಸಂಬಂಧ ಸ್ಥಳೀಯರು ಶಾಸಕರಿಗೆ ಅಭಿನಂದನೆ ಸಲ್ಲಿಸಿ ಬ್ಯಾನರ್ ಅಳವಡಿಸಿದ್ದರು. ಈ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಆರೋಪಿಗಳನ್ನು ಬಂಧಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಇದೇ ವಿಚಾರಕ್ಕೆ ಸಂಬಂದಿಸಿದಂತೆ ದೇವರು ಹಾಗೂ ದೈವಕ್ಕೂ ಹರಕೆ ಸಲ್ಲಿಸಲಾಗಿದೆ ಎಂಬ ಮಾಹಿತಿ ಕೂಡಾ ಲಭ್ಯವಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ