ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆಯ ಆತಂಕ ..?

File Photo
Advertisement

ಮಂಗಳೂರು : ಬಂಗಾಳಕೊಲ್ಲಿಯಲ್ಲಿ ನವೆಂಬರ್ 22ರ ಸುಮಾರಿಗೆ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಅಂದಿನಿಂದ ರಾಜ್ಯಾದ್ಯಂತ ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರಿನ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ. ನವೆಂಬರ್ 19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ನವೆಂಬರ್ 22, 23 ಮತ್ತು 24ರ ಸಮಯದಲ್ಲಿ ಹೊಸ ವಾಯುಭಾರ ಕುಸಿತದ ಪ್ರಭಾವದಿಂದ ಈ ಮೂರು ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದೆ.

Advertisement

ರಾಜ್ಯದಲ್ಲಿ ಮುಂದಿನ ಎರಡು ದಿನ ಹಗುರ ಮಳೆ ಮುಂದುವರಿದು, ಬಳಿಕ ಒಣಹವೆ ಇರಲಿದೆ. ನವೆಂಬರ್ 22ರ ವಾರಾಂತ್ಯದ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ನ.18 ರಿಂದ 22ರವರೆಗೆ ಮಳೆಯಾಗಲಿದ್ದು, ರಾತ್ರಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಿರುವ ಹವಾಮಾನ ಸ್ಥಿತಿಯಲ್ಲಿ ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿದ್ದ ವಾಯುಭಾರ ಕುಸಿತವು ಪ್ರಸ್ತುತ ಕೊಮೊರಿಯನ್ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದೆ. ಹೀಗಾಗಿ ದಕ್ಷಿಣ ಒಳನಾಡಿನ ಕೆಲವೆಡೆ ನ.18 ರಿಂದ 22 ರವರೆಗೆ ಹಗುರ ಮಳೆಯಾಗಲಿದೆ. ನವೆಂಬರ್ 18ರಂದು ಒಣಹವೆ ಇರಲಿದ್ದು, ನವೆಂಬರ್ 19ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಅಲ್ಲದೆ, ನವೆಂಬರ್ 22, 23 ಮತ್ತು 24ರ ಸಮಯದಲ್ಲಿ ಹೊಸ ವಾಯುಭಾರ ಕುಸಿತದ ಪ್ರಭಾವದಿಂದ ಈ ಮೂರು ದಿನಗಳಲ್ಲಿ ರಾಜ್ಯದ ಹಲವೆಡೆ ಮಳೆ ನಿರೀಕ್ಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ