ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ : ಭಾರತದ ಕೋಲ್ಕತ್ತಾ, ತ್ರಿಪುರಾದಲ್ಲೂ ಕಂಪಸಿದ ಭೂಮಿ

ಬಾಂಗ್ಲಾದೇಶದಲ್ಲಿ ಭೂಕಂಪಕ್ಕೆ ಕುಸಿದಿರುವ ಕಟ್ಟಡಗಳು
Advertisement

ಕೋಲ್ಕತ್ತಾ : ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆ ದಾಖಲಾಗಿದೆ. ಈ ಭೂಕಂಪದಿಂದಾಗಿ ಭಾರತದ ಭೂಕಂಪದ ಅಲೆಗಳು ಭಾರತದ ಪೂರ್ವ ಭಾಗದಲ್ಲಿಯೂ ಆತಂಕ ಸೃಷ್ಟಿಸಿವೆ. ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳಲ್ಲೂ ಭೂಮಿ ಕಂಪನಿಸಿದ ಅನುಭವವಾಗಿದೆ. ಕೋಲ್ಕತ್ತಾದಲ್ಲಿ ಕಟ್ಟಡಗಳು ನಡುಗಿದ ಅನುಭವವಾಗಿದ್ದು, ಜನ ಭಯಭೀತರಾಗಿ ರಸ್ತೆಗೆ ಓಡಿ ಬಂದಿದ್ದಾರೆ. 5.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ಇದರ ಕೇಂದ್ರ ಬಿಂದು ಬಾಂಗ್ಲಾದೇಶದ ನರಸಿಂಗ್ಡಿ ಬಳಿ ಪತ್ತೆಯಾಗಿದೆ.

Advertisement

ಭಾರತೀಯ ಕಾಲಮಾನದ ಪ್ರಕಾರ ಬೆಳಿಗ್ಗೆ 10:08 ರ ಸುಮಾರಿಗೆ ಈ ಘಟನೆ ನಡೆದಿದೆ. ಭೂಕಂಪದ ಕೇಂದ್ರ ಬಿಂದು ಢಾಕಾದಿಂದ ಆಗ್ನೇಯಕ್ಕೆ 10 ಕಿ.ಮೀ ದೂರದಲ್ಲಿ ಮತ್ತು ಭೂಮಿಯ 10 ಕಿ.ಮೀ ಆಳದಲ್ಲಿ ದಾಖಲಾಗಿದೆ. ಇದರ ತೀವ್ರತೆಗೆ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ಕೂಚ್ ಬೆಹಾರ್, ದಕ್ಷಿಣ ಮತ್ತು ಉತ್ತರ ದಿನಾಜ್‌ಪುರ ಜಿಲ್ಲೆಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಕಂಪನದ ತೀವ್ರತೆಗೆ ಮನೆಯಲ್ಲಿನ ಫ್ಯಾನುಗಳು ಮತ್ತು ಗೋಡೆಗೆ ಹಾಕಿದ್ದ ವಸ್ತುಗಳು ಅಲುಗಾಡಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ