ಬಂಟ್ವಾಳ : ಬಾಂಗ್ಲಾದೇಶದ ಪ್ರಜೆಗೆ ಪಾಸ್ ಪೋರ್ಟ್ ಪಡೆಯಲು ಸಹಾಯ – ವಿಟ್ಲ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅರೆಸ್ಟ್

ಬಂಟ್ವಾಳ, ಡಿ. 23 : ಶಂಕಿತ ಬಾಂಗ್ಲಾ ಪ್ರಜೆಗೆ ಪಾಸ್ ಪೋರ್ಟ್ ಮಾಡಿಕೊಡಲು ಸಹಾಯ ಮಾಡಿದ ಆರೋಪದ ಮೇಲೆ ವಿಟ್ಲ ಪೋಲೀಸ್ ಠಾಣೆಯ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಪೋಲೀಸ್ ಕಾನ್ಟೇಬಲ್ ಪ್ರದೀಪ್ ಎಂದು ಗುರುತಿಸಲಾಗಿದೆ.

Advertisement

ಶಂಕಿತ ಬಾಂಗ್ಲಾ ಪ್ರಜೆ ಶಕ್ತಿದಾಸ್ ಎಂಬಾತನಿಗೆ ಪಾಸ್ ಪೋರ್ಟ್ ಪಡೆಯಲು ಸಹಾಯ ಆರೋಪ ಇವರ ಮೇಲಿದೆ. ಅದೇ ವಿಟ್ಲ ಠಾಣೆಯ ಕಾನ್ಟೇಬಲ್ ಸಾಬೀ ಮಿರ್ಜಿ ನೀಡಿದ ದೂರಿನ ಆದಾರದ ಮೇಲೆ ಕಾನ್ಸ್ಟೇಬಲ್ ಪ್ರದೀಪ್ ನನ್ನು ಅರೆಸ್ಟ್ ಮಾಡಲಾಗಿದೆ.

ಈ ಹಿಂದೆ ಶಕ್ತಿದಾಸ್ ಪಾಸ್ ಪೋರ್ಟ್ ಅರ್ಜಿಯನ್ನು ಸಾಬೀ ಮಿರ್ಜಿ ತಿರಸ್ಕರಿಸಿದ್ದರು., ಆದರೆ ಇತ್ತೀಚೆಗೆ ಸಾಬೀ ಮಿರ್ಜಿ ಕರ್ತವ್ಯ ನಿಮಿತ್ತ ಬೇರೆ ಕಡೆಗೆ ಹೋದಾಗ ಕಾನ್ಸ್ಟೆಬಲ್ ಪ್ರದೀಪ್ ಸಹಾಯ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದೀಗ ಆರೋಪಿ ಕಾನ್ಟೇಬಲ್ ಪ್ರದೀಪ್ ಅರೆಸ್ಟ್ ಆಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.