ಬ್ಯಾಂಕಾಕ್‌ನ ಪಬ್‌ನಲ್ಲಿ ಭೀಕರ ಅಗ್ನಿ ದುರಂತ – 27 ಮಂದಿ ಸಜೀವ ದಹನ, 63 ಜನರಿಗೆ ಗಂಭೀರ ಗಾಯ

Advertisement

ಬ್ಯಾಂಕಾಕ್, ಜು. 13 : ಪಬ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ, ಕನಿಷ್ಠ 27 ಮಂದಿ ಸಜೀವ ದಹನವಾಗಿ, 63 ಜನರು ಗಾಯಗೊಂಡಿರುವ ಘಟನೆ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.

Advertisement

ನಗರದ ಉತ್ತರ ಭಾಗದ ಚತುಚಕ್ ಜಿಲ್ಲೆಯ ರೋಂಗ್ ಬೀರ್ ನಾ ಲಾಟ್ ಫ್ರಾವೊ ಪಬ್‌ವೊಂದರಲ್ಲಿ ಮಧ್ಯರಾತ್ರಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಭಾರಿ ಬೆಂಕಿ ಮತ್ತು ವಿಷಕಾರಿ ಹೊಗೆಯೊಳಗೆ ಸಿಲುಕಿ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡ 63 ಜನರ ಪೈಕಿ 22 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋದಲ್ಲಿ ನೈಟ್‌ಕ್ಲಬ್‌ನ ಮುಖ್ಯ ಬಾಗಿಲಿನಿಂದ ಬೆಂಕಿಯ ಜ್ವಾಲೆಗಳು ಮತ್ತು ದಟ್ಟವಾದ ಕಪ್ಪು ಹೊಗೆ ಆಕಾಶ ಮುಟ್ಟುತ್ತಿರುವುದು ಹಾಗೂ ಪ್ರಾಣ ಉಳಿಸಿಕೊಳ್ಳಲು ಯುವಕ-ಯುವತಿಯರು ದಿಕ್ಕಾಪಾಲಾಗಿ ಓಡುತ್ತಿರುವುದನ್ನು ಕಾಣಬಹುದಾಗಿದೆ.

Advertisement

ಘಟನಾ ಸ್ಥಳಕ್ಕೆ ಥೈಲ್ಯಾಂಡ್ ಪ್ರಧಾನಿ ಅನುಟಿನ್ ಚಾರ್ನ್ವಿರಕುಲ್ ಭೇಟಿ ನೀಡಿದ್ದು, “27 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಮಧ್ಯರಾತ್ರಿ ವೇಳಗೆ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಪರಿಣಾಮ ಪಬ್‌ನೊಳಗೆ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ. ಜನರು ದಟ್ಟ ಹೊಗೆಯಿಂದ ಪಾರಾಗಲು ಪಬ್‌ನ ಹಿಂಭಾಗದಲ್ಲಿದ್ದ ಶೌಚಾಲಯ ಮತ್ತು ಸ್ನಾನಗೃಹಗಳೊಳಗೆ ನುಗ್ಗಿ ಬಾಗಿಲು ಹಾಕಿಕೊಂಡಿದ್ದಾರೆ. ಆದರೆ ದುರಾದೃಷ್ಟವಶಾತ್ ಆ ಕಿರಿದಾದ ಜಾಗಕ್ಕೂ ವಿಷಕಾರಿ ಹೊಗೆ ತಲುಪಿದ್ದು, ಬಹುತೇಕ ಜನರು ಅಲ್ಲಿಯೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಅವರು ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ