ಬಂಟ್ವಾಳ : ಟೋಲ್ ಶುಲ್ಕ ಪಾವತಿಸದೆ ಸೆನ್ಸಾರ್ ಬ್ಯಾರಿಯರ್ ಮುರಿದು ಕಾರು ಚಲಾವಣೆ – ಪ್ರಕರಣ ದಾಖಲು

ಬಂಟ್ವಾಳ, ಜು. 9 : ಟೋಲ್ ಶುಲ್ಕ ಪಾವತಿಸದೆ ಟೋಲ್ ಗೇಟ್ ನ ಸೆನ್ಸಾರ್ ಬ್ಯಾರಿಯರ್ ಅನ್ನು ಮುರಿದು ಕಾರು ಚಲಾಯಿಸಿಕೊಂಡು ಹೋದ ಘಟನೆ ತಾಲೂಕಿನ ಕಳ್ಳಿಗೆ ಗ್ರಾಮದ ಬ್ರಹ್ಮರಕೊಟ್ಲು ಟೋಲ್ ಗೇಟ್ ನಲ್ಲಿ ನಡೆದಿದೆ. ಸದ್ಯ ಟೋಲ್ ಗೇಟ್ ಸಹಾಯಕ ವ್ಯವಸ್ಥಾಪಕ ಯಶವಂತ ಕುಂದರ್ ಅವರು ನೀಡಿದ ದೂರಿನ ಮೇರೆಗೆ ಕಾರು ಚಾಲಕನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಟೋಲ್ ಶುಲ್ಕ ಪಾವತಿಸದ ಕಾರಣ ಸೆನ್ಸಾರ್ ಬ್ಯಾರಿಯರ್ ತೆರೆಯದೆ ವಾಹನವನ್ನು ತಡೆದಿತ್ತು. ಈ ವೇಳೆ ಕಾರಿನ ಚಾಲಕ ವಾಹನದಿಂದ ಇಳಿದು ಬಂದಿದ್ದು, ಟೋಲ್ ಸಿಬ್ಬಂದಿ ಶುಲ್ಕ ಪಾವತಿಸಿ ಮುಂದುವರಿಯುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಟೋಲ್ ಸಿಬ್ಬಂದಿಯನ್ನು ತಡೆದು ನಿಲ್ಲಿಸಿ, ಸೆನ್ಸಾರ್ ಗೇಟ್ ನ ಬಳಿಗೆ ತೆರಳಿ ಅದನ್ನು ಕೈಯಿಂದ ಮುರಿದು ಹಾಕಿ, ಬಳಿಕ ಕಾರನ್ನು ಚಲಾಯಿಸಿಕೊಂಡು ಸ್ಥಳದಿಂದ ತೆರಳಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.