ಬೆಳ್ತಂಗಡಿ : ಡಿ. 19ರಂದು ಬೆಳ್ತಂಗಡಿ ವಕೀಲರ ಸಂಘ (ರಿ) ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬೆಳ್ತಂಗಡಿ, ಡಿ. 16 : ಬೆಳ್ತಂಗಡಿ ವಕೀಲರ ಸಂಘ (ರಿ) ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಡಿ. 19ರ ಶುಕ್ರವಾರದಂದು ಚರ್ಚ್ ರಸ್ತೆಯ ಹೋಲಿ ರೆಡಿಮರ್ ಅಡಿಟೋರಿಯಮ್ ನಲ್ಲಿ ಸಾಯಂಕಾಲ 6.30 ಗಂಟೆಗೆ ನಡೆಯಲಿದೆ ಎಂದು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

Advertisement

ಬೆಳ್ತಂಗಡಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪದಗ್ರಹಣ ಸಮಾರಂಭದಲ್ಲಿ ಉದ್ಘಾಟಕರಾಗಿ ಗೌರವಾನ್ವಿತ ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಗೌರವಾನ್ವಿತ ಶಶಿಕಿರಣ್ ಶೆಟ್ಟಿ ನೆರವೇರಿಸಲಿದ್ದಾರೆ. ಪದಗ್ರಹಣ ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ನೂತನ ಅಧ್ಯಕ್ಷರಾದ ಅಲೋಶಿಯಸ್ ಎಸ್. ಲೋಬೊ ಇವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಜಿಲ್ಲಾ ನ್ಯಾಯಾಲಯದ ಸರಕಾರಿ ವಕೀಲರಾದ ಮೆಲ್ವಿನ್ ಪ್ರಕಾಶ್ ನೊರೋನ್ಹಾ ಹಾಗೂ ಬೆಳ್ತಂಗಡಿ ನ್ಯಾಯಾಲಯದ ಪ್ರಿನ್ಸಿಪಾಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜಿ. ಎಮ್.ಎಫ್.ಸಿ ಮನು ಬಿ ಕೆ, ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ. ಎಮ್. ಎಫ್. ಸಿ ನ್ಯಾಯಾಧೀಶರಾದ ವಿಜೆಯೇಂದ್ರ ಟಿ. ಹೆಚ್., ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕರಾದ ಕೆ. ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಬೆಸ್ಟ್ ಫೌಂಡೇಶನ ಅಧ್ಯಕ್ಷ ರಕ್ಷಿತ್ ಶಿವರಾಂ ಇವರು ಭಾಗವಹಿಸಲಿದ್ದು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕುಗಳ ವಕೀಲರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಬೆಳ್ತಂಗಡಿ ತಾಲೂಕಿನ ತಹಶೀಲ್ದಾರರು, DYSP ರೋಹಿನಿ ಸಿ ಕೆ. ವ್ಯತ್ತ ನಿರೀಕ್ಷಕರು ಪೋಲಿಸ್ ಸಿಬ್ಬಂದಿ ವರ್ಗ, ಸರಕಾರಿ ಅಧಿಕಾರಿ ವರ್ಗ, ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರು, ನ್ಯಾಯಲಯದ ಸಿಬ್ಬಂದಿ ವರ್ಗ ಹಾಗೂ ವಕೀಲ ವೃಂದದ ಕುಟುಂಬದ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.