ಉಪ್ಪಿನಂಗಡಿ : ಬಾರ್ ಸಮೀಪ ಜಗಳ – ತಲವಾರು ಪ್ರದರ್ಶಿಸಿದ ಇಬ್ಬರು ಪೊಲೀಸ್ ವಶಕ್ಕೆ

ಉಪ್ಪಿನಂಗಡಿ, ಅ. 19 : ಬಾರ್‌ ಸಮೀಪ ನಡೆದ ಮಾತಿನ ಚಕಮಕಿ ನಡೆದು ಗಲಾಟೆ ನಡೆದಿದ್ದು, ಈ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆರೋಪದಲ್ಲಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅ.18 ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿರುವ ಬಾರ್‌ ಸಮೀಪ ಮಂಜುನಾಥ್‌, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಗಲಾಟೆ ನಡೆದಿದೆ.

ಈ ವೇಳೆ ಮಂಜುನಾಥ್‌ ಎನ್ನುವಾತ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶನ ಮಾಡಿ ಭೀತಿ ಉಂಟುಮಾಡಿದ್ದಾನೆ ಎಂದು ಪೊಲೀಸ್‌ ಪ್ರಕಟಣೆ ತಿಳಿಸಿದೆ. ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ್‌ ಮತ್ತು ವಿಶ್ವನಾಥನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು

ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !