ಮಂಗಳೂರು : ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಚರಣೆ ನಡೆಸಿದ ಮಹಾನಗರ ಪಾಲಿಕೆ – ತೀವ್ರ ವಿರೋಧ !

ಮಂಗಳೂರು, ಜೂ. 29 : ನಗರದ ಪುರಭವನದ ಸಮೀಪದ ಫುಟ್ ಪಾತ್ ನಲ್ಲಿ ವ್ಯಾಪಾರನಿರತ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು. ಆದರೆ, ವ್ಯಾಪಾರದಲ್ಲೆ ಬದುಕು ಕಟ್ಟಿಕೊಂಡಿದ್ದ ವ್ಯಾಪಾರಿಗಳು ತೀವ್ರವಾಗಿ ವಿರೋಧಿಸಿದ್ದಾರೆ.

Advertisement

ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್ ಸ್ಥಳದಲ್ಲಿ ಉಪಸ್ಥಿತರಿದ್ದು, ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮಾರ್ಗದರ್ಶನ ನೀಡಿದರು.ಈ ವೇಳೆ ಕಾರ್ಯಾಚರಣೆಯನ್ನು ಪ್ರಶ್ನಿಸಿದ ಬೀದಿಬದಿ ವ್ಯಾಪಾರಿಗಳನ್ನು ಪೊಲೀಸರು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು. ಕಾರ್ಯಾಚರಣೆಗೆ ಮೊದಲು ಮನಪಾ ಆಯುಕ್ತ ರವಿಚಂದ್ರ ನಾಯಕ್ ಬೀದಿ ವ್ಯಾಪಾರಿಗಳ ಬಳಿ ತೆರಳಿ ಇಲ್ಲಿ ಕಾನೂನು ಪ್ರಕಾರ, ನಿಯಮ ಪ್ರಕಾರ ವ್ಯಾಪಾರ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ವ್ಯಾಪಾರಿಗಳು ನಾವು ನಲುವತ್ತು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇವೆ. ನಿಯತ್ತಿನಿಂದ ದುಡಿಯುತ್ತಿದ್ದೇವೆ, ನಮಗೆ ನೀವು ಬದಲಿ ವ್ಯವ ಸ್ಥೆ ಮಾಡಿಕೊಡಿ ಎಂದು ಮನವಿ ಮಾಡಿದರು. ನಿಮಗೆ ಬದಲಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ಆಯುಕ್ತರು ಹೇಳಿದಾಗ, ಹಾಗೆ ಹೇಳಬೇಡಿ ಸಾರ್.. ನಮಗೆ ನ್ಯಾಯ ಕೊಡಿ ಎಂದು ಮನವಿ ಮಾಡಿದಾಗ ಆಗುವುದಿಲ್ಲ ಯಾರಾದರೂ ನಿಯಮ ಉಲ್ಲಂಘಿಸಿ ಮುಂದುವರಿದರೆ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳಲಾಗುವುದು’’ ಎಂದು ಮನಪಾ ಆಯುಕ್ತ ರವಿಚಂದ್ರ ನಾಯಕ್ ಮುನ್ನಚ್ಚರಿಕೆ ನೀಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.