ಬೆಳಾಲು : ಶ್ರೀ ಧ. ಮಂ. ಅ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ, ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣ ಕಾರ್ಯಕ್ರಮ

Advertisement

ಬೆಳಾಲು, ಸೆ. 05 : ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆ ಬೆಳಾಲಿನಲ್ಲಿ  ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪ್ರೊ ಕಬಡ್ಡಿ ಆಟಗಾರ ಗಗನ್ ಗೌಡ ಮಾತನಾಡಿ,
ಕ್ರೀಡೆ ನಮ್ಮಲ್ಲಿ ಶಿಸ್ತು, ಸಮಯ ಪಾಲನೆ, ಆತ್ಮವಿಶ್ವಾಸ, ಸಹಕಾರ ಮತ್ತು ಸೋಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ ಕ್ರೀಡೆ ಮೂಲಕ ಆರೋಗ್ಯವಂತ ದೇಹ, ಚುರುಕಾದ ಮನಸ್ಸು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಆರೋಗ್ಯಕರ ಜೀವನಕ್ಕೆ ಕ್ರೀಡೆ ಉತ್ತಮ ಮಾರ್ಗ ಎಂದು ತಿಳಿಸಿದರು. ವಿದ್ಯಾರ್ಥಿನಿ ಸುಷ್ಮಾ ಕ್ರೀಡಾ ದಿನ ವಿಶೇಷತೆಯ ಕುರಿತು ಮಾತನಾಡಿದರು.

ಉಷಾ ಎನ್ ಉಡುಪ ಸ್ಮರಣಾರ್ಥ ದತ್ತಿ ನಿಧಿಯಿಂದ ವಿದ್ಯಾರ್ಥಿಗಳಿಗೆ ಪಾದರಕ್ಷೆಯನ್ನು ಶ್ರೀ ಗಿರೀಶ್ ಭಾರಿತ್ತಾಯ ಪಾರಳ ಇವರು ವಿತರಿಸಿದರು.

ಶಾಲೆಯ ಹಿರಿಯ ವಿದ್ಯಾರ್ಥಿಗಳ   ಸಹಕಾರದಿಂದ ನೀಡಿದ ವಿದ್ಯಾರ್ಥಿಗಳ ಶಾಲಾ ಶುಲ್ಕ ಮತ್ತು ಐಡಿ ಕಾರ್ಡ್ ನ್ನು ಹಿರಿಯ ವಿದ್ಯಾರ್ಥಿಗಳಾದ ಶ್ರೀ ಗಣೇಶ್ ಕನಿಕ್ಕಿಲ ಮತ್ತು ರಾಧಾಕೃಷ್ಣ ಮಾಯ  ವಿತರಿಸಿದರು.

ವೇದಿಕೆಯಲ್ಲಿ ರಾಷ್ಟ್ರೀಯ ಕ್ರೀಡಾಪಟು ನಿಶಾ ಬನಂದೂರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ  ಪ್ರಮೀಳಾ,  ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕರಾದ ಕೃಷ್ಣಾನಂದ ರಾವ್ ಸ್ವಾಗತಿಸಿ, ಕಿರಣ್ ವಂದಿಸಿದರು. ಸುಮನ್ ಯು. ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ