ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026, ಸಹಸ್ರಾರು ಜನರು ಭಾಗಿ !

ಬೆಳ್ತಂಗಡಿ, ನ. 08 : ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾದಿಂದ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡ 7ನೇ ವರ್ಷದ ದೀಪಾವಳಿ ದೋಸೆ ಹಬ್ಬ-2026ಕ್ಕೆ ನ.8ರಂದು ದ.ಕ ಜಿಲ್ಲಾ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸತೀಶ್ ಕುಂಪಲ ಅವರು ದೀಪ ಬೆಳಗಿಸಿ, ದೋಸೆ ಹೊಯ್ದು ಬೆಳ್ತಂಗಡಿ ಬಸ್‌ನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ದ.ಕ ಜಿಲ್ಲಾ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಸತೀಶ್ ಕುಂಪಲ ಅವರು, ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾರ್ಯಕ್ರಮಗಳು ಮಾದರಿಯಾಗಿದ್ದು, ತುಳುನಾಡಿನ ಸಂಸ್ಕೃತಿಯಾದ ದೀಪಾವಳಿಯ ಸಂದರ್ಭದಲ್ಲಿ ದೋಸೆ ಹಬ್ಬ ಮಾಡುವ ಮೂಲಕ ಹಿಂದುತ್ವಕ್ಕೆ ದೊಡ್ಡ ಶಕ್ತಿ ನೀಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಸಕ ಹರೀಶ್ ಪೂಂಜ ಅವರು ಪ್ರಸ್ತಾವಿಕವಾಗಿ ಮಾತನಾಡಿ ಕಳೆದ 7 ವರ್ಷಗಳಿಂದ ಬೆಳ್ತಂಗಡಿ ಬಸ್‌ ನಿಲ್ದಾಣದಲ್ಲಿ ದೋಸೆ ಹಬ್ಬ ಆಚರಿಸುತ್ತಿರುವ ಯುವ ಮೋರ್ಚಾದ ಎಲ್ಲ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಉದ್ಯಮಿ ಅತುಲ್‌ಕುಮಾರ್, ಯಕ್ಷಗಾನ ಕಲಾವಿದೆ ಅರ್ಷಿಯಾ ಖಾನ್, ಚಲನಚಿತ್ರ ನಟಿ ಕಾರುಣ್ಯ ರಾಮ್, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ನಂದನ್‌ಕುಮಾರ್ ಮಲ್ಯ, ಜಿಲ್ಲಾ ಪ್ರಮುಖ ಯತೀಶ್ ಆಳ್ವಾ, ಉಪವಿಭಾಗದ ಪ್ರಭಾರಿ ಜಯಂತ್ ಕೋಟ್ಯಾನ್, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ರಶ್ಮಿ ಸಾವಂತ್, ಹಿರಿಯ ವೈದ್ಯ ಡಾ. ಎಂ.ಎನ್ ತುಳಪುಳೆ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಮನ್‌ಕೀ ಬಾತ್ ಸಂಯೋಜಕ ಸೀತಾರಾಮ ಬೆಳಾಲು, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಉಮೇಶ್ ಕುಲಾಲ್, ಯುವಮೋರ್ಚಾ ತಾಲೂಕು ಕಾರ್ಯದರ್ಶಿ ಜಯಪ್ರಕಾಶ್ ಕಡಮಾಜೆ ಉಪಸ್ಥಿತರಿದ್ದರು.

“ಪ್ರಜಾಪ್ರಭುತ್ವ ಉಳಿಸಿ – ಅರಾಜಕತೆ ಅಳಿಸಿ ಪಾದಯಾತ್ರೆ”

ದೋಸೆ ಹಬ್ಬ ಚಾಲನೆಗೂ ಮುನ್ನ ದೇಶವನ್ನು ಅಸ್ಥಿರಗೊಳಿಸಲು ಹೊರಟಿರುವ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ಷಡ್ಯಂತ್ರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಾಣಿ ಶಿಕ್ಷಣ ಸಂಸ್ಥೆ ಬಳಿಯಿಂದ – ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಪಾದಯಾತ್ರೆಗೆ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆಯನ್ನು ನೀಡಲಾಯಿತು. ಪಾದಯಾತ್ರೆಯಲ್ಲಿಯೂ ಕೂಡಾ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ತಾಯಿ ಮತ್ತು ಶಿಶು ಮರಣ ಪ್ರಮಾಣ ಶೂನ್ಯ, ಲೇಡಿಗೋಶನ್ ಆಸ್ಪತ್ರೆಗೆ ರಾಜ್ಯ ಪ್ರಶಸ್ತಿ ದೊರೆತಿರುವುದು ಸಂತಸದ ವಿಚಾರ – ಸಚಿವ ಯು.ಟಿ. ಖಾದರ್