ಬೆಳ್ತಂಗಡಿ, ಜು. 6 : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ 125 ನೇ ಜನ್ಮ ದಿನಾಚರಣೆಯನ್ನು ಇಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು.
ಜನ ಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇವರ 125 ನೇ ಜನ್ಮ ದಿನಾಚರಣೆಯಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮಂಡಲ ಕಾರ್ಯದರ್ಶಿಗಳಾದ ಜಯಾನಂದ ಕಲ್ಲಾಪು, ಪ್ರಭಾಕರ ಸವಣಾಲು, ನಗರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ, ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಗಣೇಶ್. ಆರ್. ಲಾಯಿಲ, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.


