ಬೆಳ್ತಂಗಡಿ, ಜು. 23 : ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ತಮ್ಮ ಹಕ್ಕಿಗಾಗಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಕೇಂದ್ರ ಸರಕಾರದ ಲಾಠಿ ಏಟಿನ ಹಾಗೂ ರಾಹುಲ್ ಗಾಂಧಿಯವರ ಬಂಧನದ ವಿರುದ್ಧ ಪ್ರತಿಭಟನೆ ಬೆಳ್ತಂಗಡಿ ಮೂರು ಮಾರ್ಗದ ಬಳಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ನಾಗೇಶ್ ಕುಮಾರ್ ಗೌಡ ಅವರು “NEET ಪ್ರಶ್ನೆ ಪತ್ರಿಕೆ ಸೋರಿಕೆ ಕೃತ್ಯವು ಅಕ್ಷಮ್ಯ ಅಪರಾಧವಾಗಿದೆ. ದೆಹಲಿಯಲ್ಲಿ ನ್ಯಾಯ ಕೇಳಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಆರ್ ಎಸ್ ಎಸ್ ಗೂಂಡಾಗಳ ಮೂಲಕ ಹಲ್ಲೆಯನ್ನು ನಡೆಸಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ’ಯವರು ತಕ್ಷಣ ರಾಜೀನಾಮೆ ನೀಡಬೇಕು. ಮುಂದಿನ ದಿನಗಳಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೆ ಆಂಧೋಲನ ನಡೆಸಲಿದ್ದೇವೆ ಎಂದು ಹೇಳಿದರು.

ರಸ್ತೆ ತಡೆ, ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ ಆಕ್ರೋಶ :
ಪ್ರತಿಭಟನೆಯ ಸಂದರ್ಭದಲ್ಲಿ ಸಚಿವ ಧರ್ಮೇಂದ್ರ ಪ್ರಧಾನ್ ಪ್ರತಿಕೃತಿ ದಹಿಸಿ ಹಾಗೂ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಯಿತು. ಪೊಲೀಸರು ರಸ್ತೆ ತಡೆಯನ್ನು ತಡೆಯಲು ಮುಂದಾದಾಗ ಮಾತಿನ ಚಕಮಕಿಯೂ ಕಂಡುಬಂತು.

ಈ ಸಂದರ್ಭದಲ್ಲಿ, ಕೆಪಿಸಿಸಿ ವಕ್ತಾರ ಅಮೃತ್ ಶೆಣೈ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗೇಶ್ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಮಿತಾ, ಕೆಪಿಸಿಸಿ ಕಾರ್ಯದರ್ಶಿ ಪ್ರವೀಣ್ ಹಳ್ಳಿಮನೆ, ಯುವ ಕಾಂಗ್ರೆಸ್ ಹಕೀಂ ಕೊಕ್ಕಡ ಸೇರಿದಂತೆ ಮತ್ತಿತ್ತರ ಪ್ರಮುಖರು ಉಪಸ್ಥಿತರಿದ್ದರು.


