ಬೆಳ್ತಂಗಡಿ, ಜು. 12 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬೆಳ್ತಂಗಡಿಯ ಶ್ರೀ ಗುರು ಸಾನಿಧ್ಯ ಸಭಾಭವನದಲ್ಲಿ ಜುಲೈ 12ರಂದು ನಡೆಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಉದ್ಘಾಟಿಸಿ, ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಸಭಾಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ನೂತನ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಪಣಕಜೆ ಮತ್ತು ಇತರ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ನೆರವೇರಿಸಿದರು.

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು, ಕ್ರಾಂತಿವೀರ ಸಂಘದ ಜಿಲ್ಲಾಧ್ಯಕ್ಷ ಸಂಪತ್ ಬಿ. ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣೆ ನಡೆಯಿತು. ಕಾರ್ಯಕ್ರಮದ ಮೊದಲು ಹೃತಿಕ ಕರ್ಕೇರ ತಂಡದಿಂದ ನೃತ್ಯ ಗಾನ ಸಿಂಚನ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಬೆಳ್ತಂಗಡಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡುಕೋಡಿ ಸ್ವಾಗತಿಸಿದರು.ಮಾಜಿ ಅಧ್ಯಕ್ಷ ಅಶ್ವಥ್ ಕುಮಾರ್ ಪ್ರಸ್ತಾವನೆ ಗೈದರು. ಕಾರ್ಯದರ್ಶಿ ಮಧುರ ರಾಘವ ವರದಿ ವಾಚಿಸಿದರು. ಮಾಜಿ ಅಧ್ಯಕ್ಷ ಸದಾಶಿವ ಊರ ಚುನಾವಣಾ ಅಧಿಕಾರಿಯಾಗಿ ನೂತನ ಪದಾಧಿಕಾರಿಗಳ ವಿವರ ನೀಡಿದರು.
ಆಕಾಶ್ ಗೇರುಕಟ್ಟೆ ಮತ್ತು ಸುಧಾ ರಮಾನಂದ ಕಾರ್ಯಕ್ರಮ ನಿರೂಪಿಸಿದರು. ಕೇಂದ್ರ ಸಮಿತಿಯ ಪದಾಧಿಕಾರಿಗಳು, ಘಟಕದ ಮಾಜಿ ಅಧ್ಯಕ್ಷರು, ಮಾಜಿ ನಿರ್ದೇಶಕರು, ಸಲಹೆಗಾರಾರು, ಪದಾಧಿಕಾರಿಗಳು, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರು,, ಸಂಚಲನಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.


