ಭಟ್ಕಳ: ಮುರಿನಕಟ್ಟೆ ಒಡೆದ ಮುಸ್ಲಿಂ ಸಂಘಟನೆಯೊಂದರ ಪ್ರಮುಖರು – ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ

Advertisement

ಕಾರವಾರ, ಮೇ 24 : ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಧಾರ್ಮಿಕ ಮುರಿನಕಟ್ಟೆ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರೀ ವಿವಾದ ಸೃಷ್ಟಿಯಾಗಿದ್ದು, ಮುಸ್ಲಿಂ ಸಂಘಟನೆಯೊಂದರ ಪ್ರಮುಖರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಉದ್ವಿಗ್ನ ಘಟನೆ ಭಾನುವಾರ ನಡೆದಿದೆ.

Advertisement

ಭಟ್ಕಳದ ಜಾಗಟೆ ಕಟ್ಟೆ ಎಂಬಲ್ಲಿದ್ದ ಐತಿಹಾಸಿಕ ಮುರಿನಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ತೆರವುಗೊಳಿಸಲಾಗಿತ್ತು. ಇತ್ತೀಚೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಸುಪರ್ದಿಗೆ ಒಳಪಡುವ ಅದೇ ಜಾಗದಲ್ಲಿ ಮುಂಜಾನೆ ಮುರಿನಕಟ್ಟೆಯನ್ನು ಮರು ನಿರ್ಮಾಣ ಮಾಡಿದ್ದರು. ಆದರೆ, ಈ ನಿರ್ಮಾಣಕ್ಕೆ ಸ್ಥಳೀಯ ಮುಸ್ಲಿಂ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು ಹಾಗೂ ಕಟ್ಟೆಯನ್ನು ತಕ್ಷಣವೇ ತೆರವುಗೊಳಿಸುವಂತೆ ಪಟ್ಟು ಹಿಡಿದಿದ್ದರು.

Advertisement

ಜಾಗಟೆ ಕಟ್ಟೆ ಬಳಿ ಏಕಾಏಕಿ ಜಮಾಯಿಸಿದ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರ ಗುಂಪು, ಬೆಳಿಗ್ಗೆ ನಿರ್ಮಿಸಲಾಗಿದ್ದ ಮುರಿನಕಟ್ಟೆಯನ್ನು ಒಡೆದು ಹಾಕಿದ್ದಾರೆ. ಈ ವೇಳೆ ಸೃಷ್ಟಿಯಾಗಿದ್ದ ಗೊಂದಲದ ವಾತಾವರಣವನ್ನು ನಿಯಂತ್ರಿಸಲು ಮುಂದಾದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ