ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು ?

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಭರ್ಜರಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಈ ನಡುವೆ ವಿರೋಧ ಪಕ್ಷಗಳು “ಮತ ಕಳ್ಳತನ” ಸೇರಿದಂತೆ ಬೇರೆ ಬೇರೆ ಆರೋಪಗಳನ್ನು ಮುಂದುವರಿಸಿದೆ.

Advertisement

ಮತ ಎಣಿಕೆಯ ಅಂತಿಮ ಅಂತಿಮ ಘಟ್ಟದಲ್ಲಿದೆ, ಈಗಲೂ ಎನ್‌ಡಿಎ 200 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್‌ಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಮತ್ತು ಎಸ್‌ಪಿ ನಾಯಕರು ಚುನಾವಣಾ ಆಯೋಗದ ಮೇಲೆ ಮತ್ತು ಮತದಾರರಪಟ್ಟಿ ‘ವಿಶೇಷ ತೀವ್ರ ಪರಿಷ್ಕರಣೆ’ (ಎಸ್‌ಐಆರ್ ) ಮೇಲೆ ಅನುಮಾನ ವ್ಯಕ್ತಪಡಿಸಿ ಆರೋಪ ಮುಂದುವರಿಸಿದ್ದಾರೆ. ಮತ ಎಣಿಕೆಯ ಆರಂಭಿಕ ಹಂತಗಳಲ್ಲಿ, ಎನ್‌ಡಿಎ 200 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಸರ್ಕಾರ ರಚಿಸಲು 122 ಸ್ಥಾನಗಳ ಬಹುಮತ ಸಾಕು. ಈ ಸಂಖ್ಯೆಗಳು ಅಂತಿಮ ಫಲಿತಾಂಶದಲ್ಲಿ ಹೀಗೆಯೇ ಮುಂದುವರಿದರೆ, ಇದು ಬಿಹಾರದ ರಾಜಕೀಯದಲ್ಲಿ ಒಂದು ದೊಡ್ಡ ಬದಲಾವಣೆಯನ್ನು ಸೂಚಿಸುತ್ತದೆ. ಮತ್ತೊಂದೆಡೆ, ಮಹಾಘಟಬಂಧನ್ ಮೈತ್ರಿಕೂಟ ಕೇವಲ 36 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ಬಿಜೆಪಿ ಪಕ್ಷವನ್ನು ‘ವಂಚನೆ’ ಎಂದು ಕರೆದಿದ್ದಾರೆ. ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಹಿನ್ನಡೆ ಉಂಟಾಗಿದೆ. ಇದಕ್ಕೆ ಕಾರಣ ‘ವಿಶೇಷ ತೀವ್ರ ತಪಾಸಣೆ’ (SIR) ಕಾರಣ ಎಂದು ಅವರು ಆರೋಪಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.