ಕಾಪು : ಸವಾರನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿಯಾದ ಬೈಕ್ – ಸವಾರ ಸ್ಥಳದಲ್ಲೇ ಸಾವು

Advertisement

ಕಾಪು, ಜ. 02 : ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆ ಬಳಿ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ.

Advertisement

ಸುಬ್ರಹ್ಮಣ್ಯ ಮೂಲದ ಯುವರಾಜ್ ಮೃತವ್ಯಕ್ತಿ ಎಂದು ಗುರುತಿಸಲಾಗಿದೆ.

Advertisement

ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸವಾರ ಯುವರಾಜ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ