ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಬಂಟ್ವಾಳ, ನ. 12 : ಪಟಾಕಿ ಅಂಗಡಿಯ ಹಿಂಭಾಗ ನಿಲ್ಲಿಸಿದ್ದ ಮೋಟಾರ್ ಸೈಕಲ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ವಿಟ್ಲ ಕಸಬಾ ಗ್ರಾಮದ ಅಡ್ಡದ ಬೀದಿಯ ಬಾಕಿಮಾರು ಗದ್ದೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಬೈಕ್ ಕೇಪು ಗ್ರಾಮದ ಪಡಿಬಾಗಿಲು ನಿವಾಸಿ ಮನೋಹರ್ ಅವರಿಗೆ ಸೇರಿದ್ದಾಗಿದೆ.

ನವೆಂಬರ್ 10ರಂದು ರಾತ್ರಿ ತಮ್ಮ ಕೆಲಸ ಮುಗಿಸಿದ ಮನೋಹರ್, ಮನೆಗೆ ತೆರಳುವ ಮುನ್ನ ಪಟಾಕಿ ಅಂಗಡಿಯ ಹಿಂಭಾಗ ತಮ್ಮ ಬೈಕ್ ನಿಲ್ಲಿಸಿದ್ದರು. ರಾತ್ರಿ ಸುಮಾರು 11 ಗಂಟೆಗೆ ಅಂಗಡಿ ಮುಚ್ಚಿದ ಬಳಿಕ, ಉಳಿದಿದ್ದ ಪಟಾಕಿಗಳನ್ನು ತೆಗೆದುಕೊಂಡು ಅವರು ಮನೆಗೆ ತೆರಳಿದ್ದರು.

ನವೆಂಬರ್ 11ರಂದು ಬೆಳಗ್ಗೆ ಅವರು ಸ್ಥಳಕ್ಕೆ ಮರಳಿ ಬಂದು ನೋಡಿದಾಗ, ಬೈಕ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.

ಅಪರಿಚಿತ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಶಂಕಿಸಿರುವ ಮನೋಹರ್, ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಇವರ ನೂತನ ಉತ್ಪನ್ನ ನೂತನ ತಂತ್ರಜ್ಞಾನದ “ಲಕ್ಷ್ಮೀದ್ವಾರ” ಲೋಕಾರ್ಪಣೆ