ಪುತ್ತೂರು, ಆ. 15 : ತಾಲೂಕಿನ ಕೆಯ್ಯೂರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಅಭಿಲಾಷ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




