ಮೂಡುಬಿದಿರೆ : ಬೈಕ್‌ಗೆ ಕಾರು ಢಿಕ್ಕಿ – ಗಾಯಾಳು ಸಹಸವಾರ ಪಿಯುಸಿ ವಿದ್ಯಾರ್ಥಿ ಸಾವು

ಮೂಡುಬಿದಿರೆ, ಫೆ. 13 : ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ, ಪಿಯುಸಿ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

Advertisement

ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ ಹಾಗೂ ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತ ದುರ್ದೈವಿಯಾಗಿದ್ದಾನೆ. ಕಾಮಗಾರಿ ಹಂತದಲ್ಲಿರುವ ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಸಮೀಪ ಈ ಅಪಘಾತ ನಡೆದಿದೆ. ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿದ್ದರು ಎಂದು ಹೇಳಲಾಗಿದೆ.

ಕಾರ್ಕಳ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಮೊದಲು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಶ್ರವಣ್ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.