ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ದಶಸಂಭ್ರಮದ ಪ್ರಯುಕ್ತ ಬಿಲ್ಲವ ಸಮಾಜ ಬಾಂಧವರಿಗಾಗಿ 8 ತಂಡಗಳ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ, ಜ. 04 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಸಹಕಾರದೊಂದಿಗೆ ಘಟಕದ
ದಶಸಂಭ್ರಮದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಬಿಲ್ಲವ ಸಮಾಜ ಬಾಂಧವರಿಗಾಗಿ 8 ತಂಡಗಳ ಬಿಡ್ಡಿಂಗ್ ಮಾದರಿಯ ಆಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಫಿ 2026 ಹಾಗೂ ಮಹಿಳೆಯರಿಗೆ ಮತ್ತು ಪುರುಷರಿಗೆ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಜ. 4ರಂದು  ಬೆಳ್ತಂಗಡಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ ದೀಪ ಬೆಳಗಿಸಿ ಉದ್ಘಾಟಟಿಸಿ ಶುಭ ಹಾರೈಸಿದರು.

Advertisement


ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೇರಾಜೆ, ಬಂಗೇರ ಬಿಗ್ರೇಡ್ ಅಧ್ಯಕ್ಷೆ ಬಿನುತಾ ಬಂಗೇರ, ಬೆಳ್ತಂಗಡಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಆಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾತನಾಡಿ ಶುಭ ಹಾರೈಸಿದರು.


ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿಸುತ್ತಿರುವ ಮಾಜಿ ಶಾಸಕ ಕೆ. ವಸಂತ ಬಂಗೇರರ ಪುತ್ರಿ ಬಿನುತಾ ಬಂಗೇರರ ಪರವಾಗಿ ಸುಜಿತಾ ವಿ. ಬಂಗೇರ ಇವರನ್ನು ಗೌರವಿಸಲಾಯಿತು.

ತಾಲೂಕು ಯುವಜನ ಒಕ್ಕೂಟದ ಮಾಜಿ ಅಧ್ಯಕ್ಷ ರಾಜೀವ್ ಸಾಲಿಯಾನ್ ಮುಂಡೂರು, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ ಬೆಳಾಲು, ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ವಸಂತ ಪೂಜಾರಿ, ಯುವ ವಾಹಿನಿ ವೇಣೂರು ಘಟಕದ ನಿಕಟ ಪೂರ್ವ ಅಧ್ಯಕ್ಷ ಶುಭಕರ ಪೂಜಾರಿ ಸಾವ್ಯ,  ಬೆಳ್ತಂಗಡಿ ಸಹಾಯಕ ಇಂಜಿನಿಯರ್ ನಿತಿನ್, ಬೆಳ್ತಂಗಡಿ ಜೇಸಿಐ ಮಂಜುಶ್ರೀ ಅಧ್ಯಕ್ಷ ಜಿತೇಶ್, ಪತ್ರ ಕರ್ತರಾದ ಮನೋಹರ್ ಬಳಂಜ, ಜಾರಪ್ಪ ಪೂಜಾರಿ ಬೆಳಾಲು, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಚಂದ್ರ ಶೇಖರ ಇಂದಬೆಟ್ಟು, ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ, ಉದ್ಯಮಿ ಗಣೇಶ್ ಸಾವ್ಯ, ಯುವ ವಾಹಿನಿ ಮಹಿಳಾ ಸಂಚಾಲನಾ ಸಮಿತಿಯ ಪ್ರಧಾನ ಸಂಚಾಲಕಿ ಲೀಲಾವತಿ ಪಣಕಜೆ,  ಯುವವಾಹಿನಿ ಘಟಕದ ಕಾರ್ಯದರ್ಶಿ ಮಧುರ ರಾಘವ, ಕೋಶಾಧಿಕಾರಿ ನಾಗೇಶ್ ಅದೇಲು ಉಪಸ್ಥಿತರಿದ್ದರು.

ಬೆಳ್ತಂಗಡಿ ಘಟಕ ಸ್ಥಾಪಕ ಅಧ್ಯಕ್ಷ ಕೇಂದ್ರ ಸಮಿತಿ ಯ ಅರೋಗ್ಯ ನಿರ್ದೇಶಕ ರಾಕೇಶ್ ಮೂಡುಕೋಡಿ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿ, ಘಟಕದ ಮಾಜಿ ಅಧ್ಯಕ್ಷ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ವಂದಿಸಿದರು. ಆಕಾಶ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ದಶ ಸ್ಪಂದನಾ ಕಾರ್ಯಕ್ರಮದ ಅಂಗವಾಗಿ ವೈದ್ಯಕೀಯ ಚಿಕಿತ್ಸೆಗೆ ಗ ಸಾಂತ್ವನಾ ನಿಧಿ ಹಸ್ತಾಂತರ ಮಾಡಲಾಯಿತು.
ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದು ಸಹಕರಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಏಕಾಏಕಿ ಅಸ್ವಸ್ಥಗೊಂಡ ಪ್ರಯಾಣಿಕ – ಬಸ್ ಅನ್ನು ಆಸ್ಪತ್ರೆಗೆ ಸಾಗಿಸಿ, ಮಾನವೀಯತೆ ಮೆರೆದ ಬಸ್ ಸಿಬ್ಬಂದಿ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

⚠️ Contents are protected on this website.