ಚಿಕ್ಕಮಗಳೂರು : ಯುವತಿಗೆ ಹುಟ್ಟುಹಬ್ಬದ ಶುಭಾಷಯ ಕೋರಿ ಸಂದೇಶ – ಕೊಂದೇ ಬಿಟ್ಟರು ಸ್ನೇಹಿತರು !

ಚಿಕ್ಕಮಗಳೂರು, ಜ. 01 : ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿ ಮೆಸೇಜ್ ಮಾಡಿದ ಕಾರಣಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

Advertisement

ಉಡೇವಾ ಮೂಲದ ಮಂಜುನಾಥ್ (28) ಕೊಲೆಯಾದ ಯುವಕ, ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕ ವೇಣು ಮತ್ತು ಇತರರು ಕೊಲೆ ಆರೋಪಿಗಳು ಎಂದು ಹೇಳಲಾಗಿದೆ.

ವೇಣುವಿನ ಜೊತೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಗೆ ಮಂಜುನಾಥ್ ಹುಟ್ಟುಹಬ್ಬದ ಶುಭಾಶಯ ಕೋರಿ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಮಾಡಿದ್ದನೆನ್ನಲಾಗಿದೆ. ಈ ವಿಚಾರವಾಗಿ ವೇಣು ಮತ್ತು ಮಂಜುನಾಥ್ ಮಧ್ಯೆ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ಗಲಾಟೆ ನಡೆದಿದೆ. ಇದು ಅತಿರೇಕಕ್ಕೆ ತಿರುಗಿದ್ದು, ವೇಣು ಹಾಗೂ ಸ್ನೇಹಿತರು ಮಂಜುನಾಥ್ ರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ತರೀಕೆರೆ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.