ಪುತ್ತೂರು : ನ. 19ರಂದು ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ

ಪುತ್ತೂರು: ನಮ್ಮ ದೇಶ ಕಂಡ ಅಪ್ರತಿಮ ನಾಯಕ, ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮವು ನವೆಂಬರ್‌ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್‌ ಕುಂಪಲ ಮಾಹಿತಿ ನೀಡಿದ್ದಾರೆ.

Advertisement

ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಲ್ಲೇಗ ಭಾರತ್‌ ಮಾತಾ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್‌ ಕುಂಪಲ ಮಾತನಾಡಿ ” ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಶಾಲಾ-ಕಾಲೇಜು ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯತ್ತ ಮೊದಲ ಹೆಜ್ಜೆ ಇಟ್ಟವರು ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರು. ಅವರ ಆಡಳಿತದ ಅವಧಿಯಲ್ಲಿ ಸಮಾಜಕ್ಕೆ ನೀಡಿದ ಕೊಡುಗೆಯನ್ನು ಮತ್ತೊಮ್ಮೆ ಮನೆ ಮನಗಳಿಗೆ ತಿಳಿಸುವ ಉದ್ದೇಶದಿಂದ ಜನ ಶತಾಬ್ಧಿ ಜಿಲ್ಲಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನವಂಬರ್‌ 19ರಂದು ಬೆಳಗ್ಗೆ 9:30 ಗಂಟೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಮೆರವಣಿಗೆ ಮೂಲಕ ತೆರಳಿ, ಆ ಬಳಿಕ ಪುತ್ತೂರಿನ ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಕ್ಷದ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್‌ ಚೌಟ, ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ‌ ಶೆಟ್ಟಿ, ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್‌, ವಿಧಾನ ಪರಿಷತ್ತಿನ ಸದಸ್ಯ ಕಿಶೋರ್‌ ಕುಮಾರ್‌ ಪುತ್ತೂರು , ಮಾಜಿ ಶಾಸಕರಾದ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಹಾಗೂ ಪುತ್ತೂರಿನ ಪ್ರಭಾರಿ ಸುನಿಲ್‌ ಆಳ್ವ, ನಗರಸಭೆ ಅಧ್ಯಕ್ಷೆ ಲೀಲಾವತಿ , ಗೋಪಾಲಕೃಷ್ಣ ಹೇರಳೆ, ಸೇರಿದಂತೆ ಹಲವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಅನ್ನಭಾಗ್ಯದಂತೆ ‘ಕನ್ಯಾ ಭಾಗ್ಯ’ ನೀಡಿ – ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಕರಿಂದ ವಿಚಿತ್ರ ಮನವಿ!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಹರೈನ್ ನಿಂದ ಊರಿಗೆ ಬಂದು ಗೆಳೆಯರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಎದೆನೋವು – ಹೃದಯಾಘಾತದಿಂದ ವ್ಯಕ್ತಿ ಸಾವು !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಜಾರ್ಖಂಡ್‌ : 1 ಕೋಟಿ ಬಹುಮಾನ ಹೊಂದಿದ್ದ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಅರೆಸ್ಟ್ !

⚠️ Contents are protected on this website.