ಬೆಳಗಾವಿ : KCA ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡುವ ಮೂಲಕ ಗಮನ ಸೆಳೆದ ಬಿಜೆಪಿ ಶಾಸಕರು

ಬೆಳಗಾವಿ, ಡಿ. 12 : ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ಬಿಸಿ ಬಿಸಿ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ. 12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ KCA ಕ್ರೀಡಾಂಗಣದಲ್ಲಿ ಮಾಧ್ಯಮ ಮಿತ್ರರ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಬಿಜೆಪಿ ಶಾಸಕರು, ಪಕ್ಷದ ಮುಖಂಡರು ಕ್ರಿಕೆಟ್ ಆಡಿ ಗಮನ ಸೆಳೆದಿದ್ದಾರೆ.

Advertisement

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ಅವರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನವು ಜನರ ಗಮನ ಸೆಳೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅನುಭವ ಹಂಚಿಕೊಂಡ ಶಾಸಕರು “ಬೆಳಗಾವಿಯ ಅಧಿವೇಶನದ ನಡುವೆ ಇಂದು ಬೆಳಗ್ಗೆ ನಮ್ಮ ಮಾಧ್ಯಮ ಸ್ನೇಹಿತರ ಜೊತೆ ಬೆಳಗಾವಿಯ KCA ಕ್ರೀಡಾಂಗಣದಲ್ಲಿ ನಮ್ಮ ರಾಜ್ಯಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ಅವರು, ಶಾಸಕ ಮಿತ್ರರು, ಪಕ್ಷದ ಮುಖಂಡರು ಮತ್ತಿತರರೊಂದಿಗೆ ಕ್ರಿಕೆಟ್ ಆಡಲಾಯಿತು. ಹಲವಾರು ಒತ್ತಡದ ಮಧ್ಯೆ ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ದೇಹಕ್ಕೆ ಉಲ್ಲಾಸ ಮತ್ತು ಮನಸ್ಸಿಗೆ ಸಂತೋಷವನ್ನು ನೀಡಿ ನಮ್ಮ ದೈಹಿಕ ಸಧೃಡತೆಯನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ.” ಎಂದಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.