ಬೆಳ್ತಂಗಡಿ : ತಡೆಗೋಡೆ ಕುಸಿತ – ಮಳೆಯನ್ನೂ ಲೆಕ್ಕಿಸದೆ ಸಾರ್ವಜನಿಕರಿಗೆ ನೆರವಾದ ಬಿಜೆಪಿ ಕಾರ್ಯಕರ್ತರು

ಬೆಳ್ತಂಗಡಿ, ಆ. 01 : ತಾಲೂಕಿನಲ್ಲಿ ಧಾರಕಾರ ಮಳೆಯಾಗುತ್ತಿದ್ದು, ತಾಲೂಕಿನ ಹಲವೆಡೆ ಹಾನಿಯುಂಟಾಗಿದೆ. ಶಿರ್ಲಾಲು ಗ್ರಾಮ ಪೆರಾಲ್ಮಾಡಿ ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತಡೆಗೋಡೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು, ಮತ್ತಷ್ಟು ಕುಸಿತದ ಭಯದಿಂದ ಸ್ಥಳೀಯರು ಆತಂಕಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಮಳೆಯನ್ನು ಲೆಕ್ಕಿಸದೆ ತುರ್ತು ದುರಸ್ತಿ ಕಾರ್ಯ ನಡೆಸಿದರು.

ಕುಸಿದ ಭಾಗಕ್ಕೆ ತಾತ್ಕಾಲಿಕವಾಗಿ ಕಲ್ಲು-ಮಣ್ಣು ಹಾಕಿ, ಬೇಲಿ ಅಳವಡಿಸಿ ಅಪಾಯವನ್ನು ತಡೆದರು. ಮತ್ತಷ್ಟು ಹಾನಿಯಾಗದಂತೆ ತಡೆಗಟ್ಟಲು ಶಾಶ್ವತ ದುರಸ್ತಿಗೆ ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನು, ಬಿಜೆಪಿ ಕಾರ್ಯಕರ್ತರ ನಿಸ್ವಾರ್ಥ ಸೇವೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್‌ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !