ನವದೆಹಲಿ : ಜ. 20ರಂದು ಬಿಜೆಪಿ ಬಿಜೆಪಿ ನೂತನ ಅಧ್ಯಕ್ಷರ ಘೋಷಣೆ – ಪಕ್ಷದ ನೂತನ ಸಾರಥಿ ಯಾರು ?

ನವದೆಹಲಿ, ಜ. 16 : ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಚುನಾವಣಾ ವೇಳಾಪಟ್ಟಿ ಶುಕ್ರವಾರ ಪ್ರಕಟಗೊಂಡಿದೆ. ಜ.19ರಂದು ನಾಮಪತ್ರ ಸಲ್ಲಿಕೆ ನಡೆಯಲಿದ್ದು, ಜ.20ರಂದು ಹೊಸ ಅಧ್ಯಕ್ಷರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

Advertisement

ಬಿಜೆಪಿಯ ರಾಷ್ಟ್ರೀಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್ ಅವರು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅದರಂತೆ, ಜನವರಿ 19ರಂದು ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳು ನಡೆಯಲಿದೆ. ಅದೇ ದಿನ ಸಂಜೆ 4ರಿಂದ 5 ಗಂಟೆಯವರೆಗೆ ದಾಖಲೆಗಳ ಪರಿಶೀಲನೆ ನಡೆಯಲಿದೆ. ಸಂಜೆ 5ರಿಂದ 6 ಗಂಟೆಯವರೆಗೆ ಉಮೇದುವಾರಿಕೆ ಹಿಂಪಡೆಯಲು ಅವಕಾಶವಿದೆ. ಅಗತ್ಯವಿದ್ದರೆ ಜನವರಿ 20ರಂದು ಮತದಾನ ನಡೆಯಲಿದೆ, ಇಲ್ಲದಿದ್ದರೆ ಅಂದೇ ನೂತನ ಅಧ್ಯಕ್ಷರ ಘೋಷಣೆಯಾಗಲಿದೆ. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಇಡೀ ಚುನಾವಣಾ ಪ್ರಕ್ರಿಯೆ ನಡೆಯಲಿದೆ.

ನಿತಿನ್ ನಬಿನ್ ಮುಂದಿನ ಬಿಜೆಪಿ ಸಾರಥಿ ?

ಪಕ್ಷದ ಮೂಲಗಳ ಪ್ರಕಾರ, ಪ್ರಸ್ತುತ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿರುವ ನಿತಿನ್ ನಬಿನ್ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಂಪೂರ್ಣ ಬೆಂಬಲ ನಬಿನ್ ಅವರಿಗಿದ್ದು, ಜೆ.ಪಿ. ನಡ್ಡಾ ಅವರ ಉತ್ತರಾಧಿಕಾರಿಯಾಗಿ ಅವರು ಪಕ್ಷದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತ ಎನ್ನಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : ನಾಳೆ ತಾಲೂಕಿನ ಅಂಗನವಾಡಿ, ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

⚠️ Contents are protected on this website.