ಶಿವಮೊಗ್ಗ : ಕಾವೇರಿ ನೀರಿಗಾಗಿ ಬಿಜೆಪಿ ಜುಲೈ 31ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ – ರೈತ ಸಂಘಟನೆಗಳ ಬೆಂಬಲ !

ಶಿವಮೊಗ್ಗ, ಜು. 29 : ಕರ್ನಾಟಕದ ಜೀವನದಿ ಕಾವೇರಿ ನೀರಿನ ವಿಚಾರದಲ್ಲಿ ರೈತರ ಹಿತಾಸಕ್ತಿಯನ್ನು ರಕ್ಷಿಸಲು ಬಿಜೆಪಿ, ಜೆಡಿಎಸ್ ಹಾಗೂ ವಿವಿಧ ರೈತ ಸಂಘಟನೆಗಳು ಜುಲೈ 31ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹೋರಾಟ ಯಾವುದೇ ರಾಜಕೀಯ ಪಕ್ಷದ ಕಾರ್ಯಕ್ರಮವಾಗಿರದೆ, ರೈತರ ಹಕ್ಕುಗಳಿಗಾಗಿ ನಡೆಯುವ ಜನಾಂದೋಲನವಾಗಿರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬುಧವಾರ ತಿಳಿಸಿದ್ದಾರೆ.

Advertisement

ಈ ಬಗ್ಗೆ ಮಾತನಾಡಿದ ಅವರು, ತಮಿಳುನಾಡಿಗೆ ಕರ್ನಾಟಕವು ಪ್ರತಿದಿನ 3500 ಕ್ಯೂಸೆಕ್ಸ್ ಕಾವೇರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಪಾರಸ್ಸು ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ದೊಡ್ಡ ಹೊಡೆತವಾಗಿದೆ. ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿ ಇದೆ. ಇಂತಹ ಪರಿಸ್ಥಿತಿಯಲ್ಲಿಯೂ ನಿರಂತರವಾಗಿ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಬಿಡುವುದರಿಂದ ರಾಜ್ಯದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ತತ್ ಕ್ಷಣವೇ ಕಾವೇರಿ ನೀರು ನಿಯಂತ್ರಣ ಸಮಿತಿ(CWRC) ಮುಂದೆ ಮರುಪರಿಶೀಲನಾ ಅರ್ಜಿ ಸಲ್ಲಿಸಿ ಕರ್ನಾಟಕದಲ್ಲಿನ ತೀವ್ರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಮಂಡಿಸಬೇಕು. ರಾಜಕೀಯ ಲಾಭಕ್ಕಾಗಿ ರೈತರ ಬದುಕಿನೊಂದಿಗೆ ಚೆಲ್ಲಾಟ ಆಡಬಾರದು ಎಂದರು.

400 ಕೋಟಿ ಭ್ರಷ್ಟಾಚಾರ

ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಕಾಂಗ್ರೆಸ್ ಸರ್ಕಾರ ಮೀಸಲಾತಿ ಹೆಸರಿನಲ್ಲಿ ನೇಮಕಾತಿ ವಿಳಂಬ ಮಾಡುತ್ತಿದೆ. ಪಶುವೈದ್ಯಾಧಿಕಾರಿ, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಸೇರಿದಂತೆ ವಿವಿಧ ನೇಮಕಾತಿಗಳಲ್ಲಿ ಸುಮಾರು ರೂ. 400 ಕೋಟಿ ಮೊತ್ತದ ಭ್ರಷ್ಟಾಚಾರ ನಡೆದಿದೆ. ಕೆಪಿಎಸ್‌ಸಿ ರಚಿಸಿರುವ ಆಂತರಿಕ ಸಮಿತಿಯಿಂದ ಸತ್ಯ ಹೊರಬರುವುದಿಲ್ಲ. ಆದ್ದರಿಂದ ಈ ಪ್ರಕರಣವನ್ನು ಸಿಬಿಐ ಅಥವಾ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಅನ್ನಭಾಗ್ಯದಂತೆ ‘ಕನ್ಯಾ ಭಾಗ್ಯ’ ನೀಡಿ – ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಕರಿಂದ ವಿಚಿತ್ರ ಮನವಿ!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಹರೈನ್ ನಿಂದ ಊರಿಗೆ ಬಂದು ಗೆಳೆಯರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಎದೆನೋವು – ಹೃದಯಾಘಾತದಿಂದ ವ್ಯಕ್ತಿ ಸಾವು !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಜಾರ್ಖಂಡ್‌ : 1 ಕೋಟಿ ಬಹುಮಾನ ಹೊಂದಿದ್ದ ಮೋಸ್ಟ್ ವಾಂಟೆಡ್ ಮಾವೋವಾದಿ ನಾಯಕ ಅರೆಸ್ಟ್ !

⚠️ Contents are protected on this website.