ಬೆಳ್ತಂಗಡಿ, ಆ. 18 : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಗರಣದ ಆರೋಪಿಯಾಗಿರುವ ನಾಗೇಂದ್ರನನ್ನು ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ, ಧರಣಿ ಸತ್ಯಾಗ್ರಹ ಬೆಳ್ತಂಗಡಿ ತಾಲೂಕು ಕಛೇರಿ ಮೈದಾನದಲ್ಲಿ ನಡೆಯಿತು.

ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ ಧರಣಿ ಸತ್ಯಾಗ್ರಹವು ಮುಂದುವರಿಯಲಿದೆ. ಧರಣಿ ಸತ್ಯಾಗ್ರಹದಲ್ಲಿ ಮಾಜಿ ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ದ.ಕ. ಬಿಜೆಪಿ ಜಿಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು ಸೇರಿದಂತೆ, ಪ್ರಮುಖರು ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದರು.




