ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಮಂಡಲದ ಸಭೆ : ನೂತನ ಪದಾಧಿಕಾರಿಗಳ ನೇಮಕ

ಬೆಳ್ತಂಗಡಿ, ಏ. 22 : ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ರಂದು ಪಕ್ಷದ ಕಚೇರಿಯಲ್ಲಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನೆರವೇರಿತು.

Advertisement

ಮಂಡಲ ಯುವಮೋರ್ಚಾ ನೂತನವಾಗಿ ಉಪಾಧ್ಯಕ್ಷರಾಗಿ ಹರೀಶ್ ಸಂಬೋಲ್ಯ, ಕಾರ್ಯದರ್ಶಿಯಾಗಿ ಜಗದೀಶ್ ಕನ್ನಾಜೆ ಹಾಗೂ ಸದಸ್ಯರುಗಳಾಗಿ ಮನೀಶ್ ಡಿ. ಎ ಧರ್ಮಸ್ಥಳ, ಸಂತೋಷ್ ಪೂಜಾರಿ ಇಂದಬೆಟ್ಟು ಇವರುಗಳಿಗೆ ಅಧಿಕಾರ ಹಸ್ತಾಂತರಿಸಲಾಯಿತು.

ಸಭೆಯಲ್ಲಿ ಮುಂದಿನ ಸಂಘಟನಾತ್ಮಕ ವಿಚಾರವಾಗಿ ಚರ್ಚಿಸಲಾಯಿತು ಹಾಗೂ ಪಕ್ಷ ಸಂಘಟನೆಯ ಬಗ್ಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ. ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಭರತ್ ಕೃಷ್ಣಾಪುರ ಇವರುಗಳು ಉಪಸ್ಥಿತರಿದ್ದರು. ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ ಸ್ವಾಗತಿಸಿದರು. ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಗಣೇಶ್ ಲಾಯಿಲ ಧನ್ಯವಾದವಿತ್ತರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.