ಬೆಳ್ತಂಗಡಿ : ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ – ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ, ಜ. 06 : ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿ ವಿಶೇಷ ಕಾರ್ಯಕಾರಿಣಿ ಸಭೆಯು ಜ. 5 ರಂದು ಜೈನ್ ಪೇಟೆಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.

Advertisement

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಪಕ್ಷದ ಧ್ವಜ ಸ್ವೀಕಾರ ಮಾಡುವ ಮೂಲಕ ಭಾಜಪ ಪಕ್ಷಕ್ಕೆ ಸೇರ್ಪಡೆಗೊಂಡರು. ಅವರನ್ನು ಸಂಸದ ಬೃಜೇಶ್ ಚೌಟರವರು ಪಕ್ಷದ ಧ್ವಜ ನೀಡುವ ಮೂಲಕ ಬರಮಾಡಿಕೊಂಡರು.

ಈ ಸಂದರ್ಭ ವೇದಿಕೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ಹಾಗೂ ವಸಂತಿ ಮಚ್ಚಿನ ಉಪಸ್ಥಿತರಿದ್ದರು. ಸಭೆಯಲ್ಲಿ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.