ಕಾಸರಗೋಡು : ಯುವಕನನ್ನು ಅಪಹರಿಸಿ ಬಾಲಕಿ ಜೊತೆ ನಗ್ನವಾಗಿ ವೀಡಿಯೋ ಚಿತ್ರೀಕರಿಸಿ ಬ್ಲಾಕ್ಮೇಲ್ – 1 ಲಕ್ಷಕ್ಕೂ ಅಧಿಕ ಹಣ ದೋಚಿದ ದುಷ್ಕರ್ಮಿಗಳು !

Advertisement

ಕಾಸರಗೋಡು, ಸೆ. 03 : ದುಷ್ಕರ್ಮಿಗಳ ತಂಡವೊಂದು ಯುವಕನನ್ನು ಕಾರಿನಲ್ಲಿ ಅಪಹರಿಸಿ ಕ್ವಾರ್ಟರ್ಸ್‌ನ ಕೊಠಡಿಯಲ್ಲಿ ಕೂಡಿ ಹಾಕಿ, ಬಲವಂತವಾಗಿ ಬಾಲಕಿ ಜೊತೆ ನಗ್ನವಾಗಿ ನಿಲ್ಲಿಸಿ ವಿಡಿಯೋ ಚಿತ್ರೀಕರಣ ಮಾಡಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆಯೊಡ್ಡಿ 1,02,000 ರೂ. ಸುಲಿಗೆ ಮಾಡಿದ ಘಟನೆಯೊಂದು ವರದಿಯಾಗಿದೆ.

ಸೇರಾಜೆಯ ವ್ಯಕ್ತಿ ಸುಜಿತ್‌ ನೀಡಿದ ದೂರಿನಂತೆ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಆ.29 ರಂದು ಸಂಜೆ ಈ ಘಟನೆ ನಡೆದಿದೆ ಎನ್ನಲಾಗಿದೆ.

ಉಕ್ಕಿನಡ್ಕದಲ್ಲಿ ಸುಜಿತ್‌ ಎಂಬುವವರನ್ನು ಐವರ ತಂಡ ಕತ್ತಿ ತೋರಿಸಿ ಬೆದರಿಕೆಯೊಡ್ಡಿ ಕಾರಿನಲ್ಲಿ ಅಪಹರಿಸಿ ಚೆರ್ಕಳಕ್ಕೆ ಸಮೀಪದ ಕ್ವಾರ್ಟರ್ಸ್‌ಗೆ ಕರೆದೊಯ್ದು, ಕೊಠಡಿಯಲ್ಲಿ ಕೂಡಿ ಹಾಕಿ ನಂತರ ಬೆದರಿಕೆಯೊಡ್ಡಿ ಸುಜಿತ್‌ ಅವರನ್ನು ನಗ್ನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ಕೊಠಡಿಯಲ್ಲಿದ್ದ ಬಾಲಕಿ ಜೊತೆ ನಿಲ್ಲಿಸಿ ವಿಡಿಯೋ ಮಾಡಿ, ನಾವು ಕೇಳಿದಷ್ಟು ಹಣ ನೀಡದೇ ಹೋದಲ್ಲಿ ಪೋಕ್ಸೋ ಪ್ರಕರಣದಲ್ಲಿ ಸಿಲುಕಿಸುವುದಾಗಿ ಅಪರಿಚಿತರ ಗ್ಯಾಂಗ್ ಬೆದರಿಸಿದೆ. ಕೊಲೆಗೈಯ್ಯುವುದಾಗಿ ಬೆದರಿಕೆಯೊಡ್ಡಿದ ನಂತರ 1,02,000 ರೂ. ಸುಲಿಗೆ ಮಾಡಿ ಬಿಡುಗಡೆಗೊಳಿಸಿದ್ದಾರೆ ಎಂದು ಸುಜಿತ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಬದಿಯಡ್ಕ ಪೊಲೀಸರು ಐವರ ವಿರುದ್ಧ ಕೇಸು ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ