ಬೆಳ್ತಂಗಡಿ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ – ಬೆಳ್ತಂಗಡಿ ಭಜರಂಗದಳದಿಂದ ದೂರು

ಬೆಳ್ತಂಗಡಿ, ಜು. 18 : ಬೀಸಿರೋಡ್ ಬಸ್ ನಿಲ್ದಾಣದಲ್ಲಿ ಅಮಾಯಕ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ “ಬಜರಂಗದಳ‌ ದ ಮುಖಂಡ ಚೇತನ್” ಹಾಗೂ “ಬಜರಂಗದಳದ ಶಾಖೆಯಿಂದ ತರಬೇತಿ ಪಡೆದಿದ್ದ” ಎಂಬ ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕೋಮು ಸೌಹಾರ್ದತೆ ಕದಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಬಜರಂಗದಳ ಬೆಳ್ತಂಗಡಿ ಪ್ರಖಂಡ ವತಿಯಿಂದ ದೂರು ದಾಖಲಿಸಲಾಯಿತು.

Advertisement

ಆರೋಪಿಯ ತಿರುಚಿದ ಭಾವಚಿತ್ರ ಹಾಗೂ ಪ್ರಚೋಧನಕಾರಿ ಸಂದೇಶಗಳನ್ನು ವಾಟ್ಸಾಪ್ ಗುಂಪುಗಳಲ್ಲಿ ಹಂಚಲಾಗಿದ್ದು ಈ ಸಂಬಂಧ ಕಾನೂನುಬಾಹಿರ ಕೃತ್ಯ ಎಸಗಿರುವ ರಶೀದ್ ಲಾಯಿಲ ಮತ್ತು ಅನ್ವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.