ಬೆಳ್ತಂಗಡಿ, ನ. 07 : ದೇಶವನ್ನು ಅಸ್ಥಿರಗೊಳಿಸಲು ಹೊರಟಿರುವ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ಷಡ್ಯಂತ್ರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನ. 08ರಂದು ಜಾಗೃತಿ ಅಭಿಯಾನ ನಡೆಯಲಿದೆ.

ದೇಶವನ್ನು ಅಸ್ಥಿರಗೊಳಿಸಲು ಹೊರಟಿರುವ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳ ಷಡ್ಯಂತ್ರದ ವಿರುದ್ಧ ನವೆಂಬರ್ 08 ಆದಿತ್ಯವಾರದಂದು “ಪ್ರಜಾಪ್ರಭುತ್ವ ಉಳಿಸಿ – ಅರಾಜಕತೆ ಅಳಿಸಿ ಪಾದಯಾತ್ರೆ”ಯು ಬೆಳಗ್ಗೆ 08 ಗಂಟೆಯಿಂದ ವಾಣಿ ಶಿಕ್ಷಣ ಸಂಸ್ಥೆ ಬಳಿಯಿಂದ – ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ನಡೆಯಲಿದೆ.

