ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಕಚೇರಿಗೆ ಸಚಿವ ಎನ್ ಎಸ್ ಬೋಸರಾಜ್ ಭೇಟಿ

ಬೆಳ್ತಂಗಡಿ, ಮೇ 12 : ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವರಾದ ಎನ್.ಎಸ್. ಬೋಸರಾಜ್ ರವರು ಭೇಟಿ ನೀಡಿ, ಕಾಂಗ್ರೆಸ್ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ಸಚಿವರು, ರಾಜ್ಯದಾದ್ಯಂತ ಅಂತರ್ಜಲ ಅಭಿವೃದ್ಧಿಗಾಗಿ ಕಿಂಡಿ ಅಣೆಕಟ್ಟು ಸೇರಿದಂತೆ ಕೆರೆಗಳ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದ್ದೇವೆ. ಮಳೆಗಾಲದಲ್ಲಿ ಮಣ್ಣು ಕೊಚ್ಚಿ ಹೋಗುವುದನ್ನು ತಡೆಗಟ್ಟಲು ಕಿಂಡಿಅಣೆಕಟ್ಟು ಹಾಗೂ ತಡೆಗೋಡೆಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದೇವೆ. ಬೆಳ್ತಂಗಡಿಯಲ್ಲಿ ಹಲವಾರು ಕಿಂಡಿಅಣೆಕಟ್ಟು ಕಾಮಗಾರಿಗಳು ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ದಕ್ಷಿಣ ಕನ್ನಡ, ಉಡುಪಿ, ಕಾರವಾರ ಭಾಗದ ಕೃಷಿಕರ ಅನುಕೂಲಕ್ಕಾಗಿ ಕಿಂಡಿ ಅಣೆಕಟ್ಟುಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ರಾಜ್ಯದಲ್ಲಿ ಎಸ್ ಸಿ-ಎಸ್ ಟಿ ಸಮುದಾಯದ ಅನುಕೂಲಕ್ಕಾಗಿ ಎರಡು ವರ್ಷದಲ್ಲಿ ಸುಮಾರು 13,000 ಬೋರ್ ವೆಲ್ ಕೊರೆಸಲಾಗಿದ್ದು, ಇಡೀ ರಾಜ್ಯದಲ್ಲಿ ಅಧೀಕೃತವಾಗಿ ಸುಮಾರು 37 ಲಕ್ಷ ಬೋರ್ ವೆಲ್ ಗಳಿದೆ, ಅನಧೀಕೃತ ಇನ್ನಷ್ಟು ಇದೆ ಎಂದರು.

ಇನ್ನು, ಪಶ್ಚಿಮ ಬಂಗಾಳ ಚುನಾವಣೆ ಬಗ್ಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಎಸ್ ಐ ಆರ್ ಮೂಲಕವೇ ಬಿಜೆಪಿ ಗೆಲುವು ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ಸುಮಾರು 95 ಲಕ್ಷ ಮತದಾರರನ್ನು ಕೈಬಿಡಲಾಗಿದೆ ಎಂದು ಆರೋಪಿಸಿದ ಅವರು, ನಮ್ಮ ರಾಜ್ಯದಲ್ಲಿ ಎಸ್ ಐಆರ್ ಪ್ರಕ್ರಿಯೆ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಯಾವುದೇ ರೀತಿಯ ಗೊಂದಲ ಉಂಟಾಗದಂತೆ, ವಿನಾ:ಕಾರಣ ಮತದಾರರನ್ನು ಕೈ ಬಿಡದಂತೆ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷರಾದ ಸತೀಶ್ ಬಂಗೇರ ಕಾಶಿ ಪಟ್ನ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಕೆ.ಎಂ ನಾಗೇಶ್ ಕುಮಾರ್ ಗೌಡ, ಪ್ರವೀಣ್ ಹಳ್ಳಿಮನೆ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಹಲವಾರು ಮಂದಿ ತಮ್ಮ ಅಹವಾಲುಗಳನ್ನು ಸಚಿವರಿಗೆ ನೀಡಿದರು, ಇದಕ್ಕೆ ಸಚಿವರಾದ ಎನ್.ಎಸ್. ಬೋಸರಾಜ್ ರವರು ಪೂರಕ ಸ್ಪಂದನೆ ನೀಡಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.