ಬೆಳ್ತಂಗಡಿ : ಬ್ಲಾಕ್ ಕಾಂಗ್ರೆಸ್ ವತಿಯಿಂದ MGNREGA ಬಚಾವ್ ಆಂದೋಲನ – ಶಾಸಕ ಪ್ರದೀಪ್ ಈಶ್ವರ್ ಭಾಗಿ

ಬೆಳ್ತಂಗಡಿ, ಜ. 29 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್ ಆಂದೋಲನವು ಫೆ. 02ರ ಸೋಮವಾರದಂದು ನಡೆಯಲಿದೆ. ಈ ಆಂದೋಲನ ಸಭೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ, ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರಾದ ಪ್ರದೀಪ್ ಈಶ್ವರ್ ಭಾಗವಹಿಸಲಿದ್ದಾರೆ ಎಂದು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ನ ಮಾಹಿತಿ ನೀಡಿದ್ದಾರೆ.

Advertisement

ಸೋಮವಾರ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ ನಡೆಯಲಿದೆ. ಆ ಬಳಿಕ ನಡೆಯುವ ಬಹಿರಂಗ ಸಭೆಯನ್ನುದ್ಧೇಶಿಸಿ ಶಾಸಕ ಪ್ರದೀಪ್ ಈಶ್ವರ್ ಮಾತನಾಡಲಿದ್ದಾರೆ. ಈ ಆಂದೋಲನದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ಮೂಲಕ ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.