ನವದೆಹಲಿ : ವಿವಾದಿತ ಭೋಜಶಾಲಾ ಸಂಕೀರ್ಣದಲ್ಲಿ ಶುಕ್ರವಾರದ ನಮಾಜ್ ಸಲ್ಲಿಸಲು ಪ್ರತ್ಯೇಕ ಜಾಗ ಕಲ್ಪಿಸಲು ಸುಪ್ರೀಂ ಆದೇಶ

Advertisement

ನವದೆಹಲಿ, ಜು. 14 : ದೇಶದ ಗಮನ ಸೆಳೆದಿರುವ ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಸಂಕೀರ್ಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶವೊಂದನ್ನು ನೀಡಿದೆ. ವಿವಾದಿತ ಸ್ಥಳದ ಪಕ್ಕದಲ್ಲೇ ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ ಸಲ್ಲಿಸಲು ಪ್ರತ್ಯೇಕವಾದ ಮುಕ್ತ (ಖಾಲಿ) ಜಾಗವನ್ನು ಕಲ್ಪಿಸಿಕೊಡಬೇಕು ಎಂದು ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ.

Advertisement

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಲ್ಯ ಬಾಗ್ನಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು ಈ ಆದೇಶ ಹೊರಡಿಸಿದ್ದು, ಪ್ರತಿ ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ 3 ಗಂಟೆಯವರೆಗೆ ಮಾತ್ರ ನಮಾಜ್ ಸಲ್ಲಿಸಲು ಈ ಪ್ರತ್ಯೇಕ ಜಾಗದ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದೆ. ಈ ವ್ಯವಸ್ಥೆಯು ತಾತ್ಕಾಲಿಕವಾಗಿದ್ದು, ಅರ್ಜಿಗಳ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಪೀಠವು ಸ್ಪಷ್ಟಪಡಿಸಿದೆ. ಜೊತೆಗೆ, ನ್ಯಾಯಾಲಯದ ಅನುಮತಿಯಿಲ್ಲದೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ASI) ಈ ಸ್ಥಳದಲ್ಲಿ ಯಾವುದೇ ರೀತಿಯ ರಚನಾತ್ಮಕ ಬದಲಾವಣೆಗಳನ್ನು ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

Advertisement

ಭೋಜಶಾಲಾ ವಿಷಯವು ಅತ್ಯಂತ ಸೂಕ್ಷ್ಮವಾಗಿದ್ದು, ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯವರು ಸಂಯಮದಿಂದ ಇರಬೇಕು ಎಂದು ಸುಪ್ರೀಂ ಕೋರ್ಟ್ ಮನವಿ ನೀಡಿದೆ. ಅಲ್ಲದೆ, ಈ ವಿವಾದವನ್ನು ಶೀಘ್ರವಾಗಿ ಇತ್ಯರ್ಥಪಡಿಸಲು ದಿನನಿತ್ಯದ ಆಧಾರದ ಮೇಲೆ (Day-to-day basis) ವಿಚಾರಣೆ ನಡೆಸಲು ತಾನು ಸಿದ್ಧವಿರುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

ಮೇ 15 ರಂದು ಮಧ್ಯಪ್ರದೇಶ ಹೈಕೋರ್ಟ್, ವಿವಾದಿತ ಭೋಜಶಾಲಾ-ಕಮಾಲ್ ಮೌಲಾ ಮಸೀದಿ ಸಂಕೀರ್ಣವು ಸರಸ್ವತಿ ದೇವಿಗೆ ಅರ್ಪಿತವಾದ ದೇವಸ್ಥಾನ ಎಂದು ತೀರ್ಪು ನೀಡಿತ್ತು. ಜೊತೆಗೆ ಅಲ್ಲಿ ಮುಸ್ಲಿಮರು ಶುಕ್ರವಾರ ನಮಾಜ್ ಮಾಡಲು ಅವಕಾಶ ನೀಡಿದ್ದ ದಶಕಗಳ ಹಳೆಯ ಎಎಸ್‌ಐ (ASI) ಆದೇಶವನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮುಸ್ಲಿಂ ಪರ ಅರ್ಜಿದಾರರು ಸಲ್ಲಿಸಿದ ಮೇಲ್ಮನವಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಸದ್ಯಕ್ಕೆ ಈ ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ