ಬೆಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ – ಏ.17ರಂದು ಶಿಕ್ಷೆಯ ಪ್ರಮಾಣ ಪ್ರಕಟ !

ಬೆಂಗಳೂರು, ಏ. 11 : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ (ಐಇಡಿ) ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್‌ನ ತಪ್ರೊಪ್ಪಿಗೆ ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಿಶೇಷ ನ್ಯಾಯಾಲಯ ಈ ಹಿಂದೆಯೇ ಮಾನ್ಯ ಮಾಡಿದ್ದು, ಏ.17ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಾಧ್ಯತೆಗಳಿವೆ.

Advertisement

ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ನಡೆದ ವಿಚಾರಣೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಅವರು, ಆರೋಪಿಗೆ ಅಂತಿಮವಾಗಿ ಕಠಿಣ ಶಿಕ್ಷೆ ವಿಧಿಸುವಂತೆ ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಏ.17ಕ್ಕೆ ಮೊಹಮ್ಮದ್ ಶಾರೀಕ್‌ಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಾಧ್ಯತೆಗಳಿವೆ.

ಕಳೆದ 3 ತಿಂಗಳ ಹಿಂದೆಯೇ ಆರೋಪಿ ಶಾರೀಕ್ ತಾನು ಕೃತ್ಯ ಎಸಗಿದ್ದಾಗಿ ತಪ್ರೊಪ್ಪಿಕೊಂಡು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿತ್ತು. ಈ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸಿ 2024ರಲ್ಲಿ ಆರೋಪಿಗಳಾದ ಶಾರೀಕ್ ಮತ್ತು ಸೈಯದ್ ಯಾಸೀನ್ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.