70 ಅಡಿ ಉದ್ದದ ಉಕ್ಕಿನ ಸೇತುವೆಯನ್ನೇ ಕದ್ದೊಯ್ದ ಕಳ್ಳರು !

ಕೊರ್ಬಾ, ಜ. 24 : ಛತ್ತೀಸ್‌ಗಢದ ಕೊರ್ಬಾ ನಗರದಲ್ಲಿ ನಾಲ್ಕು ದಶಕಗಳ ಹಿಂದೆ ಕಾಲುವೆಯ ಮೇಲೆ ನಿರ್ಮಿಸಲಾದ 10 ಟನ್‌ಗಳಿಗಿಂತ ಹೆಚ್ಚು ತೂಕದ 70 ಅಡಿ ಉದ್ದದ ಉಕ್ಕಿನ ಸೇತುವೆಯನ್ನೇ ರಾತ್ರೋರಾತ್ರಿ ಕಳ್ಳತನ ಮಾಡಲಾಗಿದ್ದು, ಸ್ಥಳೀಯ ನಿವಾಸಿಗಳು ದಿಗ್ಧಮೆಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

Advertisement

ಜನವರಿ 18 ರಂದು, ಧೋಧಿಪರಾ ಪ್ರದೇಶದ ವಾರ್ಡ್ ಸಂಖ್ಯೆ 17 ರಲ್ಲಿ ಪಾದಚಾರಿ ಮಾರ್ಗವಾಗಿ ಬಳಸಲಾಗುತ್ತಿದ್ದ ಹಸಿಯೋ ಎಡ ಕಾಲುವೆಯ ಮೇಲೆ ನಿರ್ಮಿಸಲಾದ ಉಕ್ಕಿನ ಸೇತುವೆ ಕಾಣೆಯಾಗಿರುವುದನ್ನು ಸ್ಥಳೀಯ ನಿವಾಸಿಗಳು ಗಮನಿಸಿದ್ದಾರೆ. ಇದರ ನಂತರ ಸ್ಥಳೀಯ ಕಾರ್ಪೊರೇಟರ್ ಲಕ್ಷ್ಮಣ್ ಶ್ರೀವಾಸ್ ದೂರು ದಾಖಲಿಸಿದ್ದಾರೆ ಎಂದು ಕೊರ್ಬಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಖನ್ ಪಟ್ಟಿ ತಿಳಿಸಿದ್ದಾರೆ.

ಕೃತ್ಯದಲ್ಲಿ 15 ಜನರು ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ಕಂಡುಕೊಂಡಿದ್ದಾರೆ, ಸೇತುವೆಯನ್ನು ಗ್ಯಾಸ್ ಕಟ್ಟರ್ ಬಳಸಿ ಕತ್ತರಿಸಿ ಗುಜರಿ ಆಗಿ ಮಾರಾಟ ಮಾಡಲು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಇಲ್ಲಿಯವರೆಗೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ, ತಲೆಮರೆಸಿಕೊಂಡಿರುವ ಕಿಂಗ್‌ಪಿನ್‌ಗಳಾದ ಮುಖೇಶ್ ಸಾಹು, ಅಸ್ಲಂ ಖಾನ್ ಸೇರಿ ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.