ಮಂಗಳೂರು : ‘ಬಜಪೆ, ಕಿನ್ನಿಗೋಳಿ ಪ. ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ರಾಜ್ಯದ ಮುಂದಿನ ಚುನಾವಣೆಗೆ ದಿಕ್ಸೂಚಿ’- ಸಂಸದ ಕ್ಯಾ. ಚೌಟ

ಮಂಗಳೂರು, ಜ. 05 : ರಾಜ್ಯದಲ್ಲಿ ಯಾವಾಗ ಚುನಾವಣೆ ಬರಬಹುದು ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಹಾಗೂ ಅದನ್ನು ಎದುರಿಸುವುದಕ್ಕೆ ನಮ್ಮ ಕಾರ್ಯಕರ್ತರು ಸಿದ್ಧರಾಗಿರಬೇಕು. ಈ ಸ್ಥಳೀಯ ಚುನಾವಣೆ ಗೆಲುವು ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಕ್ಕೆ ಮತದಾರರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎನ್ನುವುದರ ಸೂಚನೆಯಾಗಿದೆ. ಈ ಮೂಲಕ ಬಿಜೆಪಿಯ ಈ ವಿಜಯಯಾತ್ರೆಯು ಇದೀಗ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಿಂದಲೇ ಆರಂಭವಾಗಿದೆ ಎಂದು ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

Advertisement

ಕಿನ್ನಿಗೋಳಿ ಹಾಗೂ ಬಜಪೆ ಪಟ್ಟಣ ಪಂಚಾಯತ್ ಚುನಾಣೆಯಲ್ಲಿ ಬಿಜೆಪಿಯು ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ನಡೆದ ವಿಜಯೋತ್ಸವ ಹಾಗೂ ಗೆಲುವು ಸಾಧಿಸಿದ ಅಭ್ಯರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಬಜಪೆ ಹಾಗೂ ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನಲ್ಲಿನ ಬಿಜೆಪಿ ಅಭ್ಯರ್ಥಿಗಳ ಈ ಗೆಲುವು ಅತ್ಯಂತ ವಿಶಿಷ್ಟವಾದ ಗೆಲುವು. ಬಜಪೆ ಅಥವಾ ಕಿನ್ನಿಗೋಳಿಗೆ ಸೀಮಿತವಾದ ಗೆಲುವು ಇದಲ್ಲ; ಬದಲಿಗೆ ಇಡೀ ಕರಾವಳಿ ಕರ್ನಾಟಕದ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರ ಸ್ವಾಭಿಮಾನದ ಗೆಲುವು. ಏಕೆಂದರೆ, ಈ ಕಾಂಗ್ರೆಸ್ ಸರ್ಕಾರವು ಕಳೆದ ಎರಡೂವರೆ ವರ್ಷದಿಂದ ನಮ್ಮ ಕರಾವಳಿ ಜನರನ್ನು ದ್ವೇಷ-ತಾತ್ಸಾರ ಭಾವದಿಂದ ನೋಡುತ್ತ ಬೆಂಕಿ ಹಚ್ಚುವವರು ಎಂದು ದೂಷಿಸುತ್ತಿದ್ದಾರೆ. ಅಂಥಹ ಹಣೆಪಟ್ಟಿ ಕಟ್ಟಲು ಹೊರಟಿರುವ ಕಾಂಗ್ರೆಸ್‌ನವರಿಗೆ ಈ ಭಾಗದ ಹಿಂದೂ, ಬಿಜೆಪಿ ಕಾರ್ಯಕರ್ತರು ತಕ್ಕ ಉತ್ತರ ಕೊಟ್ಟಿದ್ದಾರೆ. ಕರಾವಳಿ ಜನರು ಹಿಂದುತ್ವ, ರಾಷ್ಟ್ರೀಯತೆ ಪರ ಇರುವವರು. ಜಿಲ್ಲೆಯ ಜನರ ಸ್ವಾಭಿಮಾನ ಕೆಣಿಕಿಸುವುದಕ್ಕೆ ಅಥವಾ ಅವಮಾನಿಸುವ ಯತ್ನ ಮಾಡಿದರೆ ಮುಂದೆ ಯಾವುದೇ ಚುನಾವಣೆ ಬಂದರೂ ಕರಾವಳಿ ಮಾತ್ರವಲ್ಲ ರಾಜ್ಯದಲ್ಲೇ ಇದೇ ರೀತಿಯ ಉತ್ತರವನ್ನು ಮತದಾರರು ನೀಡುತ್ತಾರೆ” ಎಂದು ಅವರು ಸವಾಲು ಹಾಕಿದರು.

“ರಾಜ್ಯದಲ್ಲಿ ಯಾವಾಗ ಚುನಾವಣೆ ಬರಬಹುದು ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಹಾಗೂ ಅದನ್ನು ಎದುರಿಸುವುದಕ್ಕೆ ನಮ್ಮ ಕಾರ್ಯಕರ್ತರು ಸಿದ್ಧರಾಗಿರಬೇಕು. ಈ ಸ್ಥಳೀಯ ಚುನಾವಣೆ ಗೆಲುವು ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದಕ್ಕೆ ಮತದಾರರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎನ್ನುವುದರ ಸೂಚನೆ. ಅದರಲ್ಲಿಯೂ ಬಜಪೆ-ಕಿನ್ನಿಗೋಳಿ ಚುನಾವಣೆಯಲ್ಲಿ ಕ್ರಿಶ್ಚಿಯನ್ ಸಮುದಾಯವರು ಬಿಜೆಪಿ ಬೆಂಬಲಿಸಿರುವುದು ಪ್ರಧಾನಿ ಮೋದಿ ಅವರ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಚಿಂತನೆಯ ಆಡಳಿತಕ್ಕೆ ಸಂದ ಮನ್ನಣೆ. ಜತೆಗೆ ಕಾಂಗ್ರೆಸ್‌ನ ಈ ಓಲೈಕೆ ಅಥವಾ ತುಷ್ಠೀಕರಣ ರಾಜಕೀಯ ಇನ್ನುಮುಂದೆ ನಡೆಯುವುದಿಲ್ಲ ಎಂಬುದನ್ನು ಕೂಡ ಈ ಎರಡು ಕ್ಷೇತ್ರದ ಮತದಾರರು ತೋರಿಸಿಕೊಟ್ಟಿದ್ದಾರೆ” ಎಂದು ಹೇಳಿದ್ದಾರೆ.

ಶಾಸಕ ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮೂಲ್ಕಿ ಮೂಡುಬಿದಿರೆ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್ ಸೇರಿದಂತೆ ಹಲವು ಮುಖಂಡರು, ಪದಾಧಿಕಾರಿಗಳು ಭಾಗವಹಿಸಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.