ಶಿವಮೊಗ್ಗ : ಬ್ಯಾಂಕ್ ಸಾಲದ ನೋಟಿಸ್ ವಿಚಾರ – ಒಡಹುಟ್ಟಿದ ತಮ್ಮನನ್ನೇ ಭೀಕರವಾಗಿ ಕೊಲೆಗೈದ ಅಣ್ಣ !

ಶಿವಮೊಗ್ಗ, ಜೂ. 10 : ಬ್ಯಾಂಕ್ ಸಾಲದ ನೋಟಿಸ್ ಬಂದ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಹಳೇ ದ್ವೇಷದ ಹಿನ್ನೆಲೆಯಲ್ಲಿ, ಒಡಹುಟ್ಟಿದ ಅಣ್ಣನೇ ತನ್ನ ತಮ್ಮನಿಗೆ ದೊಣ್ಣೆಯಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಆನಂದಪುರ ಸಮೀಪದ ಮಾದರಸನಕೊಪ್ಪ ಗ್ರಾಮದಲ್ಲಿ ಸಂಭವಿಸಿದೆ. ಅಣ್ಣನ ಮಾರಣಾಂತಿಕ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮ್ಮ ರಾಘವೇಂದ್ರ (39) ಚಿಕಿತ್ಸೆ ಫಲಿಸದೆ ಜೂನ್ 9ರಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

Advertisement

ಕೊಲೆಗೆ ಕಾರಣವಾದ ಬ್ಯಾಂಕ್ ಸಾಲದ ನೋಟಿಸ್‌!

ಮಾದರಸನಕೊಪ್ಪ ಗ್ರಾಮದ ನಿವಾಸಿಗಳಾದ ಮಹೇಶ (49) ಮತ್ತು ರಾಘವೇಂದ್ರ (39) ಇಬ್ಬರೂ ಸಹೋದರರು. ಅಣ್ಣ ಮಹೇಶನ ಹೆಸರಿಗೆ ಬ್ಯಾಂಕ್ ಲೋನ್ ವಿಚಾರವಾಗಿ ಇತ್ತೀಚೆಗೆ ಬ್ಯಾಂಕಿನಿಂದ ನೋಟಿಸ್ ಬಂದಿತ್ತು. ಈ ನೋಟಿಸ್ ವಿಚಾರವಾಗಿ ಇಬ್ಬರ ನಡುವೆ ಭಿನ್ನಾಭಿಪ್ರಾಯ ಮೂಡಿ, ಮಹೇಶ್ ತನ್ನ ತಮ್ಮ ರಾಘವೇಂದ್ರನ ಮೇಲೆ ತೀವ್ರ ದ್ವೇಷ ಸಾಧಿಸುತ್ತಿದ್ದ ಎನ್ನಲಾಗಿದೆ. ನಡುರಸ್ತೆಯಲ್ಲೇ ಜವರಾಯನಾದ ಅಣ್ಣ: ಕಳೆದ ಮೇ 23ರಂದು ರಾತ್ರಿ 10:30ರ ಸುಮಾರಿಗೆ ರಾಘವೇಂದ್ರ ಅವರು ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ, ನಡುರಸ್ತೆಯಲ್ಲೇ ಹೊಂಚು ಹಾಕಿ ಕುಳಿತಿದ್ದ ಅಣ್ಣ ಮಹೇಶ, ತಮ್ಮನನ್ನು ಅಡ್ಡಗಟ್ಟಿದ್ದಾನೆ. ಈ ವೇಳೆ ಜಗಳ ತೆಗೆದು, ಕೆಟ್ಟದಾಗಿ ಬೈದು ದೊಣ್ಣೆಯಿಂದ ರಾಘವೇಂದ್ರನ ತಲೆ ಹಾಗೂ ದೇಹದ ಭಾಗಗಳಿಗೆ ಮನಬಂದಂತೆ ಭೀಕರವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಚಿಕಿತ್ಸೆ ಫಲಿಸದೆ ಕೊನೆಯುಸಿರು:

ಹಲ್ಲೆಯಿಂದ ರಕ್ತದ ಮಡುವಿನಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ರಾಘವೇಂದ್ರ ಅವರನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹಾಗೂ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಅವರು ಗುಣಮುಖರಾಗುವ ಲಕ್ಷಣಗಳು ಕಂಡುಬಂದಿರಲಿಲ್ಲ. ಆ ಬಳಿಕ ವೈದ್ಯರ ಸಲಹೆಯಂತೆ ಮನೆಗೆ ಕರೆತಂದು ಆರೈಕೆ ಮಾಡಲಾಗುತ್ತಿತ್ತಾದರೂ, ಜೂನ್ 9ರಂದು ಮುಂಜಾನೆ ಚಿಕಿತ್ಸೆ ಫಲಿಸದೇ ರಾಘವೇಂದ್ರ ಮನೆಯಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆನಂದಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಮೊಕದ್ದಮೆ ದಾಖಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿ ಅಣ್ಣ ಮಹೇಶನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ (SP) ಮಿಥುನ್ ಕುಮಾರ್, ಡಿವೈಎಸ್‌ಪಿ ಬೆನಕ ಪ್ರಸಾದ್, ಸರ್ಕಲ್ ಇನ್ಸೆಕ್ಟರ್ ಸಂತೋಷ್ ಶೆಟ್ಟಿ ಹಾಗೂ ಪಿಎಸ್‌ಐಗಳಾದ ಪ್ರವೀಣ್ ಮತ್ತು ಸುನಿಲ್ ಅವರು ಮಾದರಸನಕೊಪ್ಪ ಗ್ರಾಮದ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.