ಪೋಕ್ಸೋ ಪ್ರಕರಣ : ಮಾಜಿ ಮುಖ್ಯಮಂತ್ರಿ ಬಿಎಸ್ ವೈ’ಗೆ ಹೈಕೋರ್ಟ್‌ ಶಾಕ್‌ – ಸಮನ್ಸ್‌ ಜಾರಿ ಎತ್ತಿ ಹಿಡಿದ ಹೈಕೋರ್ಟ್

Advertisement

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಕರ್ನಾಟಕ ಹೈಕೋರ್ಟ್ ಶಾಕ್ ನೀಡಿದೆ. ಫೋಕ್ಸೋ ಪ್ರಕರಣ ಸಂಬಂಧಪಟ್ಟಂತೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿರುವುದನ್ನು ಎತ್ತಿ ಹಿಡಿದು ಬಿಎಸ್ ವೈಗೆ ಶಾಕ್ ನೀಡಿದೆ.

Advertisement

ಪೋಕ್ಸೋ ಪ್ರಕರಣದಲ್ಲಿ ಸಂಜ್ಞೇ ಪರಿಗಣಿಸಿರುವುದನ್ನು ರದ್ದುಪಡಿಸುವಂತೆ ಕೋರಿ ಬಿಜೆಪಿ ನಾಯಕ ಬಿ ಎಸ್‌ ಯಡಿಯೂರಪ್ಪ ಮತ್ತು ಇತರರು ಸಲ್ಲಿಸಿರುವ ಅರ್ಜಿಯನ್ನು ಕೆಲ ತಿಂಗಳುಗಳಿಂದ ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಡೆಸಿತ್ತು. ಗುರುವಾರ ನ್ಯಾಯಮೂರ್ತಿ ಎಂ ಐ ಅರುಣ್‌ ಅವರ ಏಕಸದಸ್ಯ ಪೀಠವು ಆದೇಶ ನೀಡಿದೆ. ಇದು ಯಡಿಯೂರಪ್ಪ ಅವರಿಗೆ ಭಾರೀ ಹಿನ್ನಡೆ ಉಂಟು ಮಾಡಿದೆ. ವಿಚಾರಣಾ ಹಂತದಲ್ಲಿ ಯಡಿಯೂರಪ್ಪ ಅವರ ಅಗತ್ಯವಿಲ್ಲದಿದ್ದರೆ ಅವರನ್ನು ವಿಚಾರಣೆಗ ಹಾಜರಾಗುವಂತೆ ಒತ್ತಾಯಿಸಬಾರದು. ಬಿಎಸ್‌ವೈ ಉಪಸ್ಥಿತಿ ಅಗತ್ಯವಿಲ್ಲದಿದ್ದರೆ ಅವರ ಪರವಾಗಿ ಸಲ್ಲಿಕೆ ಮಾಡುವ ವಿನಾಯಿತಿ ಮನವಿಯನ್ನು ವಿಚಾರಣಾಧೀನ ನ್ಯಾಯಾಲಯ ಪುರಸ್ಕರಿಸಬೇಕು ಎಂದು ನ್ಯಾಯಾಲಯ ಹೇಳಿದೆ ಎಂದು ಬಾರ್‌ ಅಂಡ್‌ ಬೆಂಚ್‌ ವರದಿ ಮಾಡಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ