ಬೆಂಗಳೂರು : ಪೋಕ್ಸೋ ಪ್ರಕರಣ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಾಜಿ ಸಿಎಂ ಯಡಿಯೂರಪ್ಪ

PM at the inauguration of the Shivamogga Airport, in Karnataka on February 27, 2023.
Advertisement

ಬೆಂಗಳೂರು, ಡಿ. 02 : ಫೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

Advertisement

ಪ್ರಕರಣ ಸಂಬಂಧಪಟ್ಟಂತೆ ಕೆಳಹಂತದ ನ್ಯಾಯಾಲಯ ಆರೋಪ ನಿಗದಿಗೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಸಿ ಬಿಎಸ್‌ವೈ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ, ಟ್ರಯಲ್‌ಗೆ ಅನುಮತಿ ನೀಡಿತ್ತು. ಬಳಿಕ 1ನೇ ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಯಡಿಯೂರಪ್ಪ ಸೇರಿದಂತೆ 4 ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಗೆ ಸಮನ್ಸ್ ಜಾರಿ ಮಾಡಿತ್ತು. ಸದ್ಯ ಈ ಸಂಬಂಧ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು, ಸುಪ್ರೀಂ ಕೋರ್ಟ್ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಾವ ರೀತಿಯ ಆದೇಶ ಮಾಡುತ್ತೋ ಎಂದು ಕಾದುನೋಡಬೇಕಿದೆ.

Advertisement

ಬೆಂಗಳೂರಿನ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಬಿಎಸ್ ಯಡಿಯೂರಪ್ಪ ಅವರು ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಸಹಾಯ ಕೇಳಿ ಬಂದಾಗ ಯಡಿಯೂರಪ್ಪನವರು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಬಾಲಕಿಯ ತಾಯಿ ದೂರು ದಾಖಲಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ