ಬಜೆಟ್‌ – ಗೃಹಲಕ್ಷ್ಮೀ ಯೋಜನೆಗಾಗಿ ಬರೋಬ್ಬರಿ 28,608 ಕೋಟಿ ರೂಪಾಯಿ ಮೀಸಲು !

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು (ಮಾರ್ಚ್ 6) ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಿದ್ದಾರೆ. 2025-26ನೇ ಸಾಲಿನ ಬಜೆಟ್‌ ಮಂಡಿಸಿರುವ ಸಿದ್ದರಾಮಯ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಭರ್ಜರಿ ಕೊಡುಗೆ ನೀಡಿದ್ದಾರೆ. ಅದರಲ್ಲೂ ಪಂಚ ಗ್ಯಾರೆಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗಾಗಿ ಬರೋಬ್ಬರಿ 28,608 ಕೋಟಿ ರೂಪಾಯಿಯನ್ನ ತಮ್ಮ ಬಜೆಟ್‌ನಲ್ಲಿ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸಿಎಂ ಸಿದ್ದರಾಮಯ್ಯ ನೀಡಿದ ಅನುದಾನ ಎಷ್ಟು?
‘’ಗುಲಾಬಿಯೆಂದರೆ ಅಮ್ಮನಿಗೆ ಇಷ್ಟ.. ಗೊತ್ತು ಅವಳಿಗೆ ಮುಳ್ಳಲ್ಲಿ ಅರಳುವ ಕಷ್ಟ’’ ಎಂಬ ಬಿ.ಎಂ. ಬಶೀರ ಅವರ ಕವನದ ಸಾಲುಗಳನ್ನ ಉಲ್ಲೇಖಿಸಿದ ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಈ ಕೆಳಕಂಡ ಅನುದಾನವನ್ನ ಘೋಷಿಸಿದರು.

ಗೃಹಲಕ್ಷ್ಮೀ ಯೋಜನೆಗೆ ಹಣ ಮೀಸಲು
‘’ಗೃಹಲಕ್ಷ್ಮಿ ಯೋಜನೆಯಡಿ ಇಲ್ಲಿಯವರೆಗೂ ಎಲ್ಲಾ ಅರ್ಹ ಫಲಾನುಭವಿಗಳಿಗೆ ಒಟ್ಟು 62,345 ಕೋಟಿ ರೂಪಾಯಿ ವೆಚ್ಚ ಭರಿಸಲಾಗಿದೆ. ಈ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಯಶಸ್ವಿಯಾಗಿ ಧನಸಹಾಯ ಪಾವತಿಸಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ಈ ಯೋಜನೆಯಡಿ 28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ’’ ಎಂದು ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ತಿಳಿಸಿದ್ದಾರೆ.

ಅಕ್ಕಪಡೆ ಯೋಜನೆ
ಮಹಿಳೆಯರು ಹಾಗೂ ಮಕ್ಕಳಿಗೆ ಸಂಕಷ್ಟದ ಸಂದರ್ಭದಲ್ಲಿ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ‘ಅಕ್ಕಪಡೆ ಯೋಜನೆ’ಯನ್ನು ಗೃಹ ಇಲಾಖೆಯ ಸಹಯೋಗದೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಸಮವಸ್ತ್ರ
ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 1,39,844 ಅಂಗನವಾಡಿ ಕಾರ್ಯಕರ್ತೆಯರು/ ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರವನ್ನು ವಿತರಿಸಲಾಗುತ್ತದೆ.

ಸಮೀಕ್ಷೆ
ಮಾಜಿ ದೇವದಾಸಿಯರ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು, ಪುನರ್ವಸತಿ ಕಲ್ಪಿಸಲು ಮತ್ತು ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಹಿನ್ನೆಲೆಯಲ್ಲಿ ಅವರ ನಿಖರ ಮಾಹಿತಿ ಸಂಗ್ರಹಿಸುವುದಕ್ಕಾಗಿ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ. ಮಾಜಿ ದೇವದಾಸಿಯರ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶಗಳನ್ನು ವಿಸ್ತರಿಸುವುದರ ಜೊತೆಗೆ ಹೆಣ್ಣುಮಕ್ಕಳಿಗೆ ಸ್ವಯಂ ಉದ್ಯೋಗ ಹಾಗೂ ವೈಯಕ್ತಿಕ ಆದಾಯೋತ್ಪನ್ನ ಚಟುವಟಿಕೆಗಳನ್ನು ಕೈಗೊಳ್ಳಲು ಅಗತ್ಯ ಆರ್ಥಿಕ ಸಹಾಯ ನೀಡುವ ಕಾರ್ಯಕ್ರಮವನ್ನು ರೂಪಿಸಿ ಜಾರಿಗೆ ತರಲು ಐದು ಕೋಟಿ ರೂಪಾಯಿ ಮೀಸಲಿಡಲಾಗಿದೆ.

ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪಸಂಖ್ಯಾತರು, ಚೇತನ ಹಾಗೂ ಧನಶ್ರೀ ಯೋಜನೆಯ ಫಲಾನುಭವಿಗಳಿಗೆ ಆದಾಯೋತ್ಪನ್ನ ಚಟುವಟಿಕೆಗಳಿಗಾಗಿ ಪ್ರಸಕ್ತ ನೀಡಲಾಗುತ್ತಿರುವ 30,000 ರೂಪಾಯಿ ಪ್ರೋತ್ಸಾಹಧನವನ್ನು 45,000 ರೂಪಾಯಿಗೆ ಹೆಚ್ಚಿಸಲಾಗುತ್ತದೆ.

ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ
ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮ್ಹಾನ್ಸ್ ಸಂಸ್ಥೆಗಳ ಸಹಯೋಗದೊಂದಿಗೆ ‘ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರ’ಗಳನ್ನು ಪ್ರಾರಂಭಿಸಲಾಗುತ್ತದೆ.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾಥಮಿಕ ಬಾಲ್ಯ ಆರೈಕೆ ಮತ್ತು ಶಿಕ್ಷಣವನ್ನು (ECCE) ಬಲಪಡಿಸಲು ಈ ಭಾಗದ ಜಿಲ್ಲೆಗಳಲ್ಲಿ ಲಭ್ಯವಿರುವ 1,668 ನಿವೇಶನಗಳಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣವನ್ನು 200 ಕೋಟಿ ರೂಪಾಯಿ ವೆಚ್ಚದಲ್ಲಿ KKRDB ಅನುದಾನದಿಂದ ಕೈಗೊಳ್ಳಲಾಗುತ್ತದೆ.

2026-27ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಹೆಚ್ಚುವರಿಯಾಗಿ 20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶದಿಂದ ಒಂದು ಕೋಟಿ ರೂಪಾಯಿ ಅನುದಾನ ಒದಗಿಸಲಾಗುತ್ತದೆ.

ಗರ್ಭಿಣಿ ಮತ್ತು ಬಾಣಂತಿಯರಿಗೆ ಬಿಸಿಯೂಟ
ಕರ್ನಾಟಕ ಸರ್ಕಾರದ ಹಿಂದಿನ ಅವಧಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಈ ಯೋಜನೆಯು ಅವರಲ್ಲಿ ರಕ್ತಹೀನತೆ ಅಪೌಷ್ಟಿಕತೆ ತಡೆಗಟ್ಟಲು ಸಹಕಾರಿಯಾಗಿತ್ತು. ತದನಂತರದಲ್ಲಿ, ಮಧ್ಯಾಹ್ನದ ಬಿಸಿಯೂಟದ ಬದಲಾಗಿ Take Home Ration ಗೆ ಒತ್ತು ನೀಡಲಾಗಿ, ಯೋಜನೆಯ ಮೂಲ ಉದ್ದೇಶ ಹಳಿತಪ್ಪಿದಂತಾಗಿರುತ್ತದೆ. ಇದನ್ನು ಮನಗಂಡು ಎಲ್ಲಾ ಫಲಾನುಭವಿಗಳಿಗೂ ಹಿಂದಿನಂತೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪ್ರತಿದಿನ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ಮರುಸ್ಥಾಪಿಸಲಾಗುತ್ತದೆ. ಅಂಗನವಾಡಿ ಕೇಂದ್ರಗಳ ಸಮಗ್ರ ಸುಧಾರಣೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುತ್ತದೆ.

2026-27ನೇ ಸಾಲಿನಲ್ಲಿ ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 63,135 ಕೋಟಿ ರೂಪಾಯಿ ಮತ್ತು ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 94,663 ಕೋಟಿ ರೂ. ಒದಗಿಸಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.