ಭಾರತವನ್ನು ಐದು ಟ್ರಿಲಿಯನ್ ಅರ್ಥವ್ಯವಸ್ಥೆಯನ್ನಾಗಿ ರೂಪಿಸುವಲ್ಲಿ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆ – ಸುನಿಲ್ ಕುಮಾರ್

ಉಡುಪಿ, ಫೆ. 02 : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಕರ್ನಾಟಕವೂ ಸೇರಿದಂತೆ ದೇಶದ ಸಮಗ್ರ ಬೆಳವಣಿಗೆಗೆ ಪೂರಕವಾಗಿದೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

Advertisement

ಐಟಿ ನವೀನತೆ, ಪ್ರವಾಸೋದ್ಯಮ ವಿಸ್ತರಣೆ, ಒಳನಾಡು ಜಲ ಸಂಪರ್ಕ, ಹೈ-ಸ್ಪೀಡ್ ರೈಲು, ಎಂಎಸ್‌ಎಂಇಗಳು ಹಾಗೂ ಸೇವಾ ಕ್ಷೇತ್ರಗಳಿಗೆ ಒತ್ತು ನೀಡುವ ಮೂಲಕ, ಭವಿಷ್ಯಕ್ಕೆ ಸಿದ್ಧವಾದ ಕರ್ನಾಟಕದ ನಿರ್ಮಾಣಕ್ಕೆ ಈ ಬಜೆಟ್ ದೃಢವಾದ ನೆಲೆಯನ್ನು ಹಾಕಿದೆ.

ಅರ್ಥ ವ್ಯವಸ್ಥೆಯ ಸೂಕ್ಷ್ಮಸಂಗತಿಗಳಿಗೂ ಆದ್ಯತೆ ನೀಡುವ ಮೂಲಕ ಪ್ರವಾಸೋದ್ಯಮ, ಕೃಷಿ, ತೋಟಗಾರಿಕೆ, ಎಂಎಸ್ ಎಂಇ, ಮೂಲ ಸೌಕರ್ಯ, ಆರ್ಥಿಕ ಕಾರಿಡಾರ್‌ಗಳ ಅಭಿವೃದ್ಧಿಗೆ ಉತ್ತೇಜನ ನೀಡಲಾಗಿದೆ. ಪರಿಸರ ಸಮತೋಲನಕ್ಕಾಗಿ ವಿಶೇಷ ಆದ್ಯತೆ ನೀಡಿರುವುದು ಈ ಬಜೆಟ್ ಇನ್ನೊಂದು ವಿಶೇಷ. ಹವಾಮಾನ ವೈತರೀತ್ಯ ದಂತಹ ಸಂಗತಿಗಳನ್ನೂ ಕೇಂದ್ರ ಸರ್ಕಾರ ಸೂಕ್ಷ್ಮ ವಾಗಿ ಗಮನಿಸುತ್ತಿದೆ ಎಂಬುದಕ್ಕೆ ಇದೊಂದು ಉದಾಹರಣೆ. ಭಾರತವನ್ನು ಐದು ಟ್ರಿಲಿಯನ್ ಅರ್ಥವ್ಯವಸ್ಥೆಯನ್ನಾಗಿ ರೂಪಿಸುವಲ್ಲಿ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.