ಬೆಳ್ತಂಗಡಿ : ಬುರುಡೆ ಗ್ಯಾಂಗ್ ಆರೋಪಿಗಳ ವಿರುದ್ಧ ವರದಿ ಸಲ್ಲಿಕೆ : ದೃಢವಾಯಿತು ಷಡ್ಯಂತ್ರ !

Advertisement

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆನ್ನಲಾದ ಸಾಮೂಹಿಕ ಹತ್ಯೆ ಆರೋಪ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ.20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು ಸಲ್ಲಿಕೆ ಮಾಡಿದೆ.

Advertisement

ಬೆಳ್ತಂಗಡಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ವರದಿಯನ್ನು 215 ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಮುಂದೆ ನ.20 ರಂದು ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಸಲ್ಲಿಕೆ ಮಾಡಿದ್ದಾರೆ.

Advertisement

ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆ ಐದು ಮಂದಿ ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬುವುದಾಗಿಯೂ ವರದಿಯಲ್ಲಿ ಅಧಿಕಾರಿಗಳು ನ್ಯಾಯಾಲಯಕ್ಕೆ ನೀಡಿದ ವರದಿಯಲ್ಲಿ ತಿಳಿಸಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ವರದಿಯ ಬಗ್ಗೆ ನ್ಯಾಯಾಲಯ ಪರಿಶೀಲಿಸಿ ಇದರ ಆಧಾರದಲ್ಲಿ ಮುಂದಿನ ತನಿಖೆ ಬಗ್ಗೆ ನ್ಯಾಯಾಲಯ ಸೂಚನೆ ನೀಡುವಂತೆ ವರದಿಯಲ್ಲಿ ಕೇಳಿಕೊಳ್ಳಲಾಗಿರುವುದಾಗಿ ತಿಳಿದು ಬಂದಿದೆ. ಒಟ್ಟು ಪ್ರಕರಣದ ತನಿಖೆ ಮುಗಿಸಿದ ಬಳಿಕ ಮುಂದಿನ ದಿನಗಳಲ್ಲಿ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ