ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

ಮಂಗಳೂರು, ಜು. 28 : ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಎಕ್ಕಾರು ಬಳಿ ಸೋಮವಾರ ಸಂಜೆ ಸಂಭವಿಸಿದೆ.

Advertisement

ಮೃತರನ್ನು ಬಶೀರ್ ಕಿನ್ನಿಗೋಳಿ(45) ಎಂದು ಗುರುತಿಸಲಾಗಿದೆ.

ದಂಪತಿ ಮುಲ್ಕಿಯ ಕೊಲ್ನಾಡಿನಲ್ಲಿ ನಡೆದ ಖಾಸಗಿ ಸಮಾರಂಭವೊಂದನ್ನು ಮುಗಿಸಿ ತಮ್ಮ ಮನೆಗೆ ವಾಪಸ್ ಹಿಂತಿರುಗುತ್ತಿದ್ದರು. ಈ ವೇಳೆ ಎಕ್ಕಾರು ಸಮೀಪ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಖಾಸಗಿ ಸರ್ವಿಸ್ ಬಸ್, ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬಶೀರ್ ಅವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಜೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.