ಸೂರ್ಯಪೇಟೆ : ಕಂಟೈನರ್ ಟ್ರಕ್ ಗೆ ಖಾಸಗಿ ಬಸ್ ಢಿಕ್ಕಿ – ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಸಾವು !

Advertisement

ಸೂರ್ಯಪೇಟೆ, ಆ. 26 : ಖಾಸಗಿ ಬಸ್ಸೊಂದು ಕಂಟೈನರ್ ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಸುಮಾರು 12 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ. ಹೈದರಾಬಾದ್-ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಸುಮಾರು 4.30ಕ್ಕೆ ಅಪಘಾತ ಸಂಭವಿಸಿದೆ.

Advertisement

ಹೈದರಾಬಾದ್‌ನಿಂದ ಏಲೂರು ಮೂಲಕ ವಿಜಯವಾಡದತ್ತ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್, ಮುಂದೆ ಸಾಗುತ್ತಿದ್ದ ಕಂಟೈನರ್ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಸುಮಾರು 12 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

42 ಮಂದಿ ಪ್ರಯಾಣ

ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಸುಮಾರು 42 ಮಂದಿ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಪೊಲೀಸರ ಪ್ರಕಾರ, ಬಸ್‌ ಡಿಕ್ಕಿ ಹೊಡೆಯುವ ಮುನ್ನವೇ ಕಂಟೈನರ್ ಟ್ರಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ